DistrictShivamogga

ಶಿವಮೊಗ್ಗ:ಸ್ವಾಮಿ ವಿವೇಕಾನಂದರ 163ನೇ ಜಯಂತಿ|ಯುವ ಪ್ರತಿಭೆಗಳಿಗೆ ವಿದ್ಯಾರ್ಥಿ ಕಾಂಗ್ರೆಸ್‌ನಿಂದ ಸನ್ಮಾನ|

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯನ್ನು ಮುಟ್ಟುವ ತನಕ ನಿಲ್ಲಬಾರದು ತಮ್ಮ ಗುರಿಯೆಡೆಗೆ ಸಾಗುವುದನ್ನು ರೂಢಿಸಿಕೊಳ್ಳಬೇಕು ಎಂದು ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್.ಕೆ. ಕರೆ ನೀಡಿದರು.

ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಶಿವಮೊಗ್ಗದ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್‌ ವತಿಯಿಂದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿತು. ಬಳಿಕ ಜಿಲ್ಲೆಯ ಯುವ ಪ್ರತಿಭೆಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಕೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯನ್ನು ಮುಟ್ಟುವ ತನಕ ನಿಲ್ಲಬಾರದು ತಮ್ಮ ಗುರಿಯೆಡೆಗೆ ಸಾಗುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಮಾತನಾಡಿ, ಸ್ವಾಮಿ ವಿವೇಕಾನಂದರಿಗೆ ನವಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ವಿದ್ಯಾರ್ಥಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಜಯಕುಮಾರ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕಾಂಗ್ರೆಸ್ ಯುವ ಮುಖಂಡ ಸಿಜಿ ಮಧುಸೂದನ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷೆ ಭಾರತಿ ರಾಮಕೃಷ್ಣ, ಗ್ಯಾರಂಟಿ ಯೋಜನೆ ಸದಸ್ಯೆ ಅರ್ಚನಾ, ಮುಖಂಡರಾದ ನಜಾಮ್, ಚರಣ್, ಗಿರೀಶ್ ವಿದ್ಯಾರ್ಥಿ ಕಾಂಗ್ರೆಸ್‌ ಕಾರ್ಯಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ರವಿಕುಮಾರ್, ಚಂದ್ರೋಜಿರಾವ್ ವರುಣ್ ವಿ ಪಂಡಿತ್, ಸುಭಾನ್, ಆದಿತ್ಯ, ಫರಾಜ್, ಆಕಾಶ್, ವಿಕಾಸ್, ಉಲ್ಲಾಸ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Follow Us

Leave a Reply

Your email address will not be published. Required fields are marked *

Back to top button