CrimeDistrictShivamogga
ಅಕ್ರಮ ಚಟುವಟಿಕೆ ತಡೆಗೆ ಪೊಲೀಸರ ಹೈಟೆಕ್ ಪ್ಲ್ಯಾನ್| ಜೂಜಾಡುತ್ತಿದ್ದವರನ್ನು ಪತ್ತೆ ಹಚ್ಚಿದ ದ್ರೋಣ್ ಕ್ಯಾಮೆರಾ| 19ಆರೋಪಿಗಳನ್ನು ಬಂಧಿಸಿದ ಭದ್ರಾವತಿ ಪೊಲೀಸರು
ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿರುವುದು ದ್ರೋಣ್ ಕ್ಯಾಮರಾ ಮೂಲಕ ಬಯಲಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾವಹಿಸಲು ಪೊಲೀಸರು ಈಗ ಹೈಟೆಕ್ ಕಣ್ಗಾವಲು ಮೊರೆ ಹೋಗುವ ಮೂಲಕ ಯಶಸ್ವಿಯಾಗಿದ್ದಾರೆ.
ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿರುವುದು ದ್ರೋಣ್ ಕ್ಯಾಮರಾ ಮೂಲಕ ಬಯಲಿಗೆ ಬಂದಿದೆ.
ಆ ಕೂಡಲೇ ಕಾರ್ಯಪ್ರವೃತ್ತರಾದ ಭದ್ರಾವತಿ ಗ್ರಾಮಾಂತರ ಪೊಲೀಸರು, ಸ್ಥಳಕ್ಕೆ ತೆರಳಿ ದಾಳಿ ನಡೆಸಿ, ತೂರುಬಿಲ್ಲೆ ಜೂಜಾಟದಲ್ಲಿ ತೊಡಗಿದ್ದ 19 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ