Bengaluru UrbanDistrictKarnatakaNationalPoliticalSpecial Stories

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ-ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ-ಸಿದ್ದರಾಮಯ್ಯ

ಬಹುಸಂಸ್ಕೃತಿಯುಳ್ಳ ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಭಾರತದ ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿರುವ ಈ ದುರಿತ ಕಾಲದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿ ಕೈಜೋಡಿಸುವಂತೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರದಂದು ಆಯೋಜಿಸಿದ್ದ ಕಾಯ೯ಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ.

ಬಹುಸಂಸ್ಕೃತಿಯುಳ್ಳ ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ ಬಡವ ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ ಎಂದರು.

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ ಎಂದು ಸಿಎಂ ಆರೋಪಿಸಿದರು.

ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದೆ. ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬಾರದು ಎಂದು ಸಿಎಂ ಹೇಳಿದರು.

ಇನ್ನು ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಸರಿಯಲ್ಲ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಜಾತಿ, ಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳ ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌, ಸಚಿವರಾದ ಎಚ್‌ ಸಿ ಮಹದೇವಪ್ಪ, ಕೆ ಎಚ್‌ ಮುನಿಯಪ್ಪ, ರಾಜಕೀಯ ಕಾಯ೯ದಶಿ೯ ನಜೀರ್‌ ಅಹ್ಮದ್‌ ಹಾಗೂ ಶಾಸಕ ಎನ್‌ ಎ ಹ್ಯಾರಿಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button