Karnataka

77ನೇ ಗಣರಾಜ್ಯೋತ್ಸವ ಸಂಭ್ರಮ|ನವದೆಹಲಿಯ ಕರ್ತವ್ಯಪಥದಲ್ಲಿ ಸಮಾರಂಭ-ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್‌ ಭಾಗಿ-ನೇರಪ್ರಸಾರ

ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ನಾಡಿನ ಸಮಸ್ತ ಜನತೆಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ನವದೆಹಲಿ: 77ನೇ ಗಣರಾಜ್ಯೋತ್ಸವ ಸಮಾರಂಭ ಕರ್ತವ್ಯಪಥದಲ್ಲಿ ನಡೆಯುತ್ತಿದೆ. ಸಮಾರಂಭದ ಅತಿಥಿಗಳಾಗಿ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್‌ ಭಾಗಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್‌ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವದೆಹಲಿ ಹಾಗೂ ಸುತ್ತಮುತ್ತ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 77ನೇ ಗಣರಾಜ್ಯೋತ್ಸವ ಸಮಾರಂಭದ ನೇರ ಪ್ರಸಾರವನ್ನು ತಾವು ವೀಕ್ಷಿಸಬಹುದಾಗಿದೆ.

ಬೆಂಗಳೂರು: 77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ನಾಡಿನ ಸಮಸ್ತ ಜನತೆಗೆ 77ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು.

ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ವಿಡಿಯೋ ತುಣುಕು..

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button