ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಜನ್ಮದಿನಾಚರಣೆ|ಶುಭ ಕೋರಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ
ದೇವರು ನಿಮಗೆ ಸುಖ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾರೈಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಜನ್ಮದಿನದ ಅಂಗವಾಗಿ ನಾಡಿನಾದ್ಯಾಂತ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.
ತಮ್ಮ ಅವಧಿಯಲ್ಲಿ ಆರ್ಎಸ್ಎಸ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಶುಭ ಸಂದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಜೀ ಅವರಿಗೆ ಜನ್ಮದಿನದ ಶುಭಾಶಯಗಳು.
ದೇವರು ನಿಮಗೆ ಸುಖ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ.
ಬಿ ವೈ ವಿಜಯೇಂದ್ರ , ಅಧ್ಯಕ್ಷರು, ರಾಜ್ಯ ಬಿಜೆಪಿ

ಹಿರಿಯರು, ಮಾರ್ಗದರ್ಶಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂಜ್ಯ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಜೀ ರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ಇಡೀ ಜೀವನವನ್ನು ನಿರಂತರವಾಗಿ ರಾಷ್ಟ್ರ ಮತ್ತು ಸಮಾಜದ ಉನ್ನತಿಗಾಗಿ ಸಮರ್ಪಿಸಿಕೊಂಡಿರುವ ದತ್ತಾತ್ರೇಯ ಹೊಸಬಾಳೆ ಅವರು ಉತ್ತಮ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಭಗವಂತನು ನೀಡಲಿ ಎಂದು ಬಿ ವೈ ವಿಜಯೇಂದ್ರ ಪ್ರಾರ್ಥಿಸಿದ್ದಾರೆ.

ಮತ್ತು ನನ್ನಂತಹ ಲಕ್ಷಾಂತರ ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡುತ್ತಾ, ತಮ್ಮ ಅವಿರತ ರಾಷ್ಟ್ರಸೇವೆಯನ್ನು ಹೀಗೆಯೇ ಸಾರ್ಥಕವಾಗಿ ಮುಂದುವರಿಸಿಕೊಂಡು ಹೋಗುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ






