ದೆಹಲಿಯಲ್ಲಿ ಕರ್ನಾಟಕ ಬಿಜೆಪಿ ಸಂಸದರ ಸಭೆ|ಜನಪರ ಯೋಜನೆಗಳು ಜನರಿಗೆ ಮುಟ್ಟಿಸಲು ಕ್ರಮವಹಿಸಬೇಕು ಪ್ರಧಾನಿ ಮೋದಿ ಸೂಚನೆ|ಸಂಸದ ಬಿ.ವೈ.ರಾಘವೇಂದ್ರ ಭಾಗಿ
ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ನಿರಂತರ ಬೆಂಬಲ, ಮಾರ್ಗದರ್ಶನ ಹಾಗೂ ಉತ್ತೇಜನ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಜನತೆಯ ಪರವಾಗಿ ಸಂಸದ ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ರಾಜ್ಯದ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಕರೆಯಲಾಗಿದ್ದ ಕರ್ನಾಟಕ ಬಿಜೆಪಿ ಸಂಸದರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಪರ ಯೋಜನೆಗಳನ್ನು ಪ್ರತಿಮನೆಗೆ ಮುಟ್ಟಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಸಂಸದರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ, ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ನಿರಂತರ ಬೆಂಬಲ, ಮಾರ್ಗದರ್ಶನ ಹಾಗೂ ಉತ್ತೇಜನ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಇತರೆ ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.

ಶ್ರಮಿಕರ ಹಕ್ಕು-ಪ್ರಧಾನಿ ನರೇಂದ್ರ ಮೋದಿ ಕೊಡುಗೆ








