DistrictShivamogga

ಎಸ್‌.ಪಿ.ದಿನೇಶ್ ಉಚ್ಛಾಟನೆ ರದ್ದು|ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ|ಪಕ್ಷ ಬಲವರ್ಧನೆಗೆ ಶ್ರಮಿಸಲು ಕೆಪಿಸಿಸಿ ಸೂಚನೆ

ಕಳೆದ 2 ವರ್ಷ ಎರಡು ತಿಂಗಳ ಬಳಿಕ ಮತ್ತೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದಿರುವುದು ಸಂತಸ ತಂದಿದೆ ಎಂದು ಪಕ್ಷಕ್ಕೆ ಮರುಸೇರ್ಪಡೆಗೊಂಡಿರುವ ಎಸ್‌.ಪಿ.ದಿನೇಶ್ ಸಂತಸ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಚ್ಛಾಟನೆಗೊಂಡಿದ್ದ ಎಸ್‌.ಪಿ.ದಿನೇಶ್ ಸೋಮವಾರದಂದು ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರ ಸೂಚನೆ ಮೇರೆಗೆ ಉಚ್ಛಾಟನೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ​ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌.ಪಿ ದಿನೇಶ್ ಅವರನ್ನು ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಪಕ್ಷದ ಶಿಸ್ತು ಸಿದ್ದಾಂತಗಳನ್ನ ಪಾಲಿಸಿಕೊಂಡು ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರೊಂದಿಗೆ ಸಮನ್ವಯದಿಂದ ಪಕ್ಷ ಬಲವರ್ಧನೆಗೆ ಶ್ರಮವಹಿಸಲು ​ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನಕುಮಾರ್ ತಿಳಿಸಿದರು.

ಕಳೆದ 2 ವರ್ಷ ಎರಡು ತಿಂಗಳ ಬಳಿಕ ಮತ್ತೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದಿರುವುದು ಸಂತಸ ತಂದಿದೆ ಎಂದು ಪಕ್ಷಕ್ಕೆ ಮರುಸೇರ್ಪಡೆಗೊಂಡಿರುವ ಎಸ್‌.ಪಿ.ದಿನೇಶ್ ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಕೆಲ ಕಾರಣಗಳಿಂದ 2024 ರ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಯಿತು ಎಂದು ಹೇಳಿದರು.

ಈಗ ಮತ್ತೆ ಪಕ್ಷ ತಮ್ಮನ್ನ ಮರುಸೇರ್ಪಡೆಗೊಳಿಸಿ ಉಚ್ಚಾಟನೆ ಆದೇಶ ರದ್ದುಮಾಡಿರುವುದಕ್ಕೆ ಪಕ್ಷದ ಅಧ್ಯಕ್ಷರು ಮತ್ತು ಹೈಕಮಾಂಡಗೆ ಅವರು ಧನ್ಯವಾದ ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಬಲತುಂಬುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವುದಾಗಿ ಮುಖಂಡ ಎಸ್.ಪಿ.ದಿನೇಶ್ ತಿಳಿಸಿದರು.

ಜವಳಿ ಕೈಮಗ್ಗನಿಗಮದ ಅಧ್ಯಕ್ಷ ಚೇತನ್ ಗೌಡ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಜಿಲ್ಲಾ ಎಸ್ಸಿಎಸ್ಟಿ ಘಟಕದ ಅಧ್ಯಕ್ಷ ಹಾಲೇಶಪ್ಪ, ಮುಖಂಡರಾದ ಕಲೀಂಪಾಷಾ, ಸಯ್ಯದ್ ವಾಹೀದ್ ಅಡ್ಡು, ಮತ್ತಿತರರು ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button