ಶಿವಮೊಗ್ಗ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಶುದ್ಧೀಕರಣ ಅಭಿಯಾನ-6200 ಬಿಪಿಎಲ್ ಕಾರ್ಡ್ ರದ್ದು-ಆಹಾರ ಇಲಾಖೆಯ ಭರ್ಜರಿ ಕಾರ್ಯಾಚರಣೆ
ಅಕ್ಟೋಬರ್ ತಿಂಗಳೊಂದರಲ್ಲೇ ಬರೋಬ್ಬರಿ 6,200 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಗೊಳಿಸಲಾಗಿದ್ದು, ಅನರ್ಹವೆಂದು ಕಂಡುಬಂದ ಈ ಎಲ್ಲಾ ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ದಾರರ ಪತ್ತೆ ಕಾರ್ಯ ತೀವ್ರಗೊಂಡಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದೊಡ್ಡಮಟ್ಟದ ಬಿಪಿಎಲ್ ಕಾರ್ಡ್ ಶುದ್ಧೀಕರಣ ಅಭಿಯಾನಕ್ಕೆ ಮುಂದಾಗಿದೆ.
ಆದಾಯ ತೆರಿಗೆ (ಐಟಿ) ಇಲಾಖೆಗೆ ಸಲ್ಲಿಸಿದ ರಿಟರ್ನ್ಸ್ ಮಾಹಿತಿ ಮತ್ತು ಜಿಎಸ್ಟಿ ಪಾವತಿ ದಾಖಲೆಗಳನ್ನು ಆಧರಿಸಿ, ಅಕ್ಟೋಬರ್ ತಿಂಗಳೊಂದರಲ್ಲೇ ಬರೋಬ್ಬರಿ 6,200 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಗೊಳಿಸಲಾಗಿದ್ದು, ಅನರ್ಹವೆಂದು ಕಂಡುಬಂದ ಈ ಎಲ್ಲಾ ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಖಾತೆಗೆ ಜೋಡಣೆಯಾದ ಆಧಾರ್ ಸಂಖ್ಯೆ ಮತ್ತು ಐಟಿ ರಿಟರ್ನ್ಸ್ ಪ್ರತಿ ಪ್ರಮುಖ ಪಾತ್ರ ವಹಿಸಿದೆ. ಇದರ ಜೊತೆಗೆ, 25 ಲಕ್ಷಕ್ಕೂ ಅಧಿಕ ಮೊತ್ತದ ಜಿಎಸ್ಟಿ ಪಾವತಿಸಿರುವ 50ಕ್ಕೂ ಹೆಚ್ಚು ವಹಿವಾಟುದಾರರ ಬಿಪಿಎಲ್ ಕಾರ್ಡ್ಗಳನ್ನು ಸಹ ರದ್ದುಪಡಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 3.80 ಲಕ್ಷ ಬಿಪಿಎಲ್ ಕುಟುಂಬಗಳಿದ್ದು, ಅನರ್ಹರ ಪತ್ತೆ ಪ್ರಕ್ರಿಯೆ ನಿರಂತರವಾಗಿ ಮುಂದುವರೆಯಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.


