22 ವರುಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ|10 ವರುಷ ಶಿಕ್ಷೆ ವಿಧಿಸಿದ ನ್ಯಾಯಾಲಯ|ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ
ಪ್ರಕರಣದ ಆಗಿನ ತನಿಖಾಧಿಕಾರಿ ತೀರ್ಥಹಳ್ಳಿ ವೃತ್ತ ಸಿಪಿಐ ಪ್ರವೀಣ್ ನೀಲಮ್ಮನವರ್, ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಶಿವಮೊಗ್ಗ/ತೀರ್ಥಹಳ್ಳಿ: ಮಹಿಳೆಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ್ದ ದುರಳನಿಗೆ 10 ವರುಷ ಕಠಿಣ ಕಾರಾಗೃಹ ಹಾಗೂ ಮೂರು ಲಕ್ಷ ಹನ್ನೆರಡು ಸಾವಿರ ರೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 2020ನೇ ಸಾಲಿನಲ್ಲಿ ಪರಿಚಿತ ಮಹಿಳೆ ಮೇಲೆ 27 ವರುಷದ ಆರೋಪಿ ಲೈಂಗಿಕ ದೌರ್ಜನ್ಯ ಎಸೆಗಿದ್ದನು ಎಂದು ದೂರು ದಾಖಲು ಆಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿ ತೀರ್ಥಹಳ್ಳಿ ವೃತ್ತ ಸಿಪಿಐ ಪ್ರವೀಣ್ ನೀಲಮ್ಮನವರ್, ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಈ ಕುರಿತು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು.
ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,12,000/- ರೂ ದಂಡವನ್ನು ವಿಧಿಸಿ ಹಾಗೂ ನೊಂದ ಮಹಿಳೆಗೆ 2,00,000/- ರೂ ಪರಿಹಾರವನ್ನು ನೀಡಲು ಆದೇಶಿಸಿರುತ್ತಾರೆ.
ವರದಿ: ನ್ಯೂ ಇಂಡಿಯ ಕನ್ನಡ
ಶಿವಮೊಗ್ಗ.






