ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ|ಪೋಕ್ಸೋ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ|ಮೃತಪಟ್ಟ ಬಾಲಕಿ ತಾಯಿಗೆ 4ಲಕ್ಷರೂ.ಪರಿಹಾರ
2022ನೇ ಸಾಲಿನಲ್ಲಿ ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ನಿವಾಸಿ 21 ವರ್ಷದ ಯುವಕನು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು ಎಂದು ಆರೋಪಿಸಲಾಗಿತ್ತು.

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ ದಂಡ ವಿಧಿಸಿ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿ ಆದೇಶ ಹೊರಡಿಸಿದೆ.
2022ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ|
2022ನೇ ಸಾಲಿನಲ್ಲಿ ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ನಿವಾಸಿ 21 ವರ್ಷದ ಯುವಕನು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು ಎಂದು ಆರೋಪಿಸಲಾಗಿತ್ತು.
ಈ ಕುರಿತು ಆಗ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಅಭಯ್ ಪ್ರಕಾಶ್ ಸೋಮನಾಳ್, ಪಿಐ ಕುಂಸಿ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ಚಾರ್ಜ್ಶೀಟ್ ಅನ್ನು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.
ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ನ್ಯಾಯಾಧೀಶರಾದ ನಿಂಗನಗೌಡ .ಭ. ಪಾಟೀಲ್ ರವರು ದಿನಾಂಕ:20-01-2026 ರಂದು ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ ದಂಡ, ಹಾಗೂ ದಂಡ ಕಟ್ಟಲು ವಿಫಲನಾದಲ್ಲಿ 3 ವರ್ಷ ಹೆಚ್ಚುವರಿ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.
ಮೃತಪಟ್ಟಿದ್ದ ನೊಂದ ಬಾಲಕಿ ತಾಯಿಗೆ ನಾಲ್ಕು ಲಕ್ಷರೂ. ಪರಿಹಾರ|
ಲೈಂಗಿಕ ದೌರ್ಜನ್ಯದ ನಂತರ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದಳು. ನ್ಯಾಯಾಲಯವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನೊಂದ ಬಾಲಕಿಯ ತಾಯಿಗೆ ನಾಲ್ಕು ಲಕ್ಷರೂ. ಹಣವನ್ನು ಪರಿಹಾರವಾಗಿ ನೀಡಲು ಆದೇಶಿಸಿದೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.







