CrimeDistrictShivamogga

ಶಿಕಾರಿಪುರ: ಜಮೀನು ಖಾತೆ ಮಾಡಲು ಒಂದು ಲಕ್ಷರೂ. ಡಿಮ್ಯಾಂಡ್|‌ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ|

ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಸಲು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಕೋಲ್ಹಾರ, ಜಮೀನಿನ ಮಾಲೀಕರಾದ ಜಕ್ರಿಯಾ ಬೇಗ್ ಎಂಬುವವರಿಗೆ ನಾಲ್ಕು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ.

ಶಿವಮೊಗ್ಗ: ಜಮೀನಿನ ಖಾತೆ ಮಾಡಲು ಒಂದು ಲಕ್ಷರೂ. ಹಣದ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಸಲು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಕೋಲ್ಹಾರ, ಜಮೀನಿನ ಮಾಲೀಕರಾದ ಜಕ್ರಿಯಾ ಬೇಗ್ ಎಂಬುವವರಿಗೆ ನಾಲ್ಕು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ.

ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಜಕ್ರಿಯಾ ಬೇಗ್ ದೂರು ನೀಡಿದ್ದರು. ಜಕ್ರಿಯಾ ಬೇಗ್ಶ, ಶನಿವಾರದಂದು ಒಂದು ಲಕ್ಷ ರೂ. ಹಣವನ್ನು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಕೋಲ್ಹಾರ ನೀಡುವಾಗಲೇ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಹಣದ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button