Shivamogga
“ಶಿವಮೊಗ್ಗ ದಸರಾ ಮಹೋತ್ಸವ”|ವಿಶೇಷ ಅನುದಾನ ಮಂಜೂರಾತಿಗೆ ಆಗ್ರಹ|ಅಧಿವೇಶನದಲ್ಲಿಯೇ ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಚೆನ್ನಬಸಪ್ಪ
ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರದಂದು ಸಿಎಂ ಡಿ.ಕೆ.ಶಿವಕುಮಾರ್ ಆಸನದ ಬಳಿ ತೆರಳಿದ ಶಾಸಕ ಎಸ್.ಎನ್.ಚೆನ್ನಬಸಪ್ಪ ಅನುದಾನಕ್ಕೆ ಮನವಿ ಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.

ಶಿವಮೊಗ್ಗ: “ಶಿವಮೊಗ್ಗ ದಸರಾ ಮಹೋತ್ಸವ”ವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಸರ್ಕಾರದ ವತಿಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಶಿವಮೊಗ್ಗ ಶಾಸಕ ಎಸ್.ಎನ್.ಚೆನ್ನಬಸಪ್ಪ, ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಕರೆಯಲಾಗಿರುವ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರದಂದು ಸಿಎಂ ಡಿ.ಕೆ.ಶಿವಕುಮಾರ್ ಆಸನದ ಬಳಿ ತೆರಳಿದ ಶಾಸಕ ಎಸ್.ಎನ್.ಚೆನ್ನಬಸಪ್ಪ ಅನುದಾನಕ್ಕೆ ಮನವಿ ಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಶಿವಮೊಗ್ಗ ನಗರದ ಸಮಗ್ರ ವಿಕಾಸ ಮತ್ತು ಸಾಂಸ್ಕೃತಿಕ ವೈಭವಕ್ಕೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಸೌಮ್ಯ ಹೆಚ್.ಪಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ







