DistrictShivamogga

ಶಿವಮೊಗ್ಗ: ಗೃಹಬಳಕೆ ಸಿಲಿಂಡರ್‌ ಪೂರೈಕೆ ಅಭಾದಿತ| ಅಡುಗೆ ಅನಿಲ ಸಿಗದಿದ್ದರೇ ಹೆಲ್ಪ್‌ಲೈನ್‌ಗೆ ಕರೆ ಮಾಡಿ-ಡಿಸಿ ಕವಳಿಕಟ್ಟಿ

ಅಡುಗೆ ಅನಿಲ ಪೂರೈಕೆ ಸಮಸ್ಯೆ ಬಗೆಹರಿಸಲು ಸಹಾಯ ವಾಣಿ ಆರಂಭಿಸಲಾಗಿದ್ದು 9844214270 ಅಥವಾ 9148267229 ಹೆಲ್ಪಲೈನ್ ನಂಬರಗೆ ಕರೆ ಮಾಡಬಹುದೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಶಿವಮೊಗ್ಗ: ಜಿಲ್ಲೆಯ ಯಾವುದೇ ಭಾಗದಲ್ಲಿ ಗೃಹಬಳಕೆ ಸಿಲಿಂಡರ್ ಸಿಗದೇ ಸಮಸ್ಯೆಯಾದ್ರೆ ಸಾರ್ವಜನಿಕರು ತಕ್ಷಣ ಸಹಾಯವಾಣಿಗೆ ಕರೆ ಮಾಡಿ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಮಧ್ಯಪ್ರಾಚ್ಯರಾಷ್ಟ್ರಗಳ ಯುದ್ದದ ಪರಿಣಾಮ ರಾಜ್ಯದಲ್ಲಿ ಉಂಟಾಗಿರುವ ಸಿಲಿಂಡರ್ ಪೂರೈಕೆ ಸಮಸ್ಯೆಗೆ ಸಂಭಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಗೃಹಬಳಕೆ ಸಿಲಿಂಡರ್ ಪೂರೈಕೆಗೆ ಮೊದಲ ಆಧ್ಯತೆ ನೀಡಲಾಗುವುದು.

ಅಡುಗೆ ಅನಿಲ ಪೂರೈಕೆ ಸಮಸ್ಯೆ ಬಗೆಹರಿಸಲು ಸಹಾಯ ವಾಣಿ ಆರಂಭಿಸಲಾಗಿದ್ದು 9844214270 ಅಥವಾ 9148267229 ಹೆಲ್ಪಲೈನ್ ನಂಬರಗೆ ಕರೆ ಮಾಡಬಹುದೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಇನ್ನು ಹೋಟೆಲ್‌ಗಳು ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್ ಬಳಕೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಡಿಸಿ, ವಿದ್ಯಾರ್ಥಿಗಳ ಹಾಸ್ಟೆಲ್‌ಗಳು, ಆಸ್ಪತ್ರೆಗಳು, ಆಸ್ಪತ್ರೆ ಸಮೀಪದ ಹೋಟೆಲ್‌ಗಳಲ್ಲಿ ವಾಣಿಜ್ಯ ಸಿಲಿಂಡರ್ ಸಮಸ್ಯೆಯಾಗದಂತೆ ಕ್ರಮ ವಹಿಸಿರುವುದಾಗಿ ಸ್ಪಷ್ಟಪಡಿಸಿದರು.

ಇನ್ನು ಪರೀಕ್ಷಾ ಸಮಯವಾದ್ದರಿಂದ ಸರ್ಕಾರಿ,ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆಗಳಿಗೆ ಗ್ಯಾಸ್ ಸಿಲಿಂಡರ್ ಸಮಸ್ಯೆಯಿಂದ ಯಾವ ವಿದ್ಯಾರ್ಥಿಗಳಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯಕರ್ತರು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಕಾಂಗ್ರೆಸ್‌ ಅಧ್ಯಕ್ಷ ವಿಜಯಕುಮಾರ್, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಇದ್ದರು.

Follow Us

Leave a Reply

Your email address will not be published. Required fields are marked *

Back to top button