DistrictShivamogga

ವಿಬಿಜಿ ರಾಮಜೀ ವಿರೋಧಿಸುತ್ತಿರುವ ಕ್ರಮ ಸರಿಯಲ್ಲ|ವಿಧಾನಮಂಡಲ ವಿಶೇಷ ಅಧಿವೇಶನದಿಂದ ತೆರಿಗೆ ಹಣ ಪೋಲು!ಸಂಸದ ಬಿ.ವೈ.ರಾಘವೇಂದ್ರ ಆರೋಪ

ವಿಬಿಜಿ ರಾಮ್ ಜೀ ಯೋಜನೆಯಲ್ಲಿನ ಗುಣಾತ್ಮಕ ಅಂಶಗಳನ್ನ ಪರಿಗಣಿಸಿ ರಾಜ್ಯಸರ್ಕಾರ ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಹಕರಿಸದೇ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.

ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಿ ಕಾಂಗ್ರೆಸ್ ಸರ್ಕಾರ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವ ಅವಶ್ಯಕತೆ ಏನಿದೆ? ಎಂದು ಶಿವಮೊಗ್ಗ ಲೋಕಸಭಾ ಸಂಸದ ರಾಘವೇಂದ್ರ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತಷ್ಟು ಅಭಿವೃದ್ದಿಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ವಿಶೇಷ ಅಧಿವೇಶನ ನಡೆಸಲಿ, ಈಗ ನಡೆಸಲು ಉದ್ದೇಶಿಸಿರುವ ವಿಧಾನಮಂಡಲದ ವಿಶೇಷ ಅಧಿವೇಶನ ರದ್ದುಪಡಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಗುರುವಾರ ಶಿವಮೊಗ್ಗದ ವಿನೋಬನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬದೊಂದಿಗೆ ವಿವಿಧ ಸಂಘಸಂಸ್ಥೆಗಳು ಮತ್ತು ಬಿಜೆಪಿ ಕಾರ್ಯಕರ್ತರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಬಿಜಿ ರಾಮ್ ಜೀ ಯೋಜನೆಯಲ್ಲಿನ ಗುಣಾತ್ಮಕ ಅಂಶಗಳನ್ನ ಪರಿಗಣಿಸಿ ರಾಜ್ಯಸರ್ಕಾರ ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಹಕರಿಸದೇ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.

ಕೇಂದ್ರ ಸರ್ಕಾರದ ತೀವ್ರ ಮತದಾರರ ಪರಿಷ್ಕರಣೆ ಕಾರ್ಯವನ್ನೂ ರಾಜ್ಯ ಸರ್ಕಾರವು ವಿರೋಧಿಸುತ್ತಿದೆ. ಬಿಜೆಪಿ ಹಾಗು ಮಿತ್ರ ಪಕ್ಷಗಳ ಆಡಳಿತವಿರುವ ಎಲ್ಲ ರಾಜ್ಯಗಳಲ್ಲೂ ಎಸ್ಐಆರ್ ಕಾರ್ಯಕ್ರಮ ನಡೆದಿದ್ದು ಕೋಟ್ಯಾಂತರ ಅನರ್ಹ ಮತದಾರರ ಹೆಸರು ಕೈಬಿಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳನ್ನ ವಿರೋಧಿಸುವುದೇ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮವಾಗಿದೆ ಎಂದು ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದರು.

Follow Us

Leave a Reply

Your email address will not be published. Required fields are marked *

Back to top button