Shivamogga

ಕಸ್ತೂರಿರಂಗನ್ ವರದಿಯ ಜಾರಿಗೆ ವಿಚಾರ|ಜನರಲ್ಲಿ ಆತಂಕ ಮೂಡಿಸುತ್ತಿರುವ ಕೇಂದ್ರ ಸರ್ಕಾರ|ಮಲೆನಾಡಿನ ಹಿತ ಕಾಪಾಡುವಲ್ಲಿ ಬಿಜೆಪಿ ವೈಫಲ್ಯ-ಮಧು ಬಂಗಾರಪ್ಪ

ಕಸ್ತೂರಿರಂಗನ ವರದಿ ಜಾರಿಗೆ ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರವಾಗಿ ಖಂಡಿಸಿದರು.

ಮಲೆನಾಡಿನ ಜನರ ವಿರೋಧಿ, ಕಸ್ತೂರಿರಂಗನ್ ವರದಿಯ ಜಾರಿಗೆ ವಿಚಾರವಾಗಿ ಕೇಂದ್ರ ಸರ್ಕಾರ ಪದೇ ಪದೇ ಕರಡು ಅಧಿಸೂಚನೆ ಹೊರಡಿಸಿ, ಜನರಲ್ಲಿ ಆತಂಕ ಮೂಡಿಸುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇರವಾಗಿ ಆರೋಪಿಸಿದ್ದಾರೆ.

ಇದಕ್ಕೆ ರಾಜ್ಯದ ಬಿಜೆಪಿ ನಾಯಕರ ವೈಫಲ್ಯವೇ ಕಾರಣ ಎಂದು ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ರದ್ದುಗೊಳಿಸಿ, ಮಲೆನಾಡನ್ನು ಉಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದಿಂದ ತೀರ್ಥಹಳ್ಳಿಯಲ್ಲಿ ಏರ್ಪಡಿಸಿದ್ದ ​ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಸ್ತೂರಿರಂಗನ ವರದಿ ಜಾರಿಗೆ ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರವಾಗಿ ಖಂಡಿಸಿದರು.

ಕಸ್ತೂರಿರಂಗನ್‌ ವರದಿ ಜಾರಿಗೆಗೆ ರಾಜ್ಯ ಸರ್ಕಾರದ ಸಂಪೂರ್ಣ ವಿರೋಧವಿದೆ ಎಂದು ಹೇಳಿದರು. ಜಿಲ್ಲೆಯ ಜನರು ಆತಂಕಗೊಂಡಡು ಪ್ರತಿಭಟನೆ ನಡೆಸುತ್ತಿರುವಾಗ ಅವರೊಂದಿಗೆ ನಾನೂ ನಿಲ್ಲಬೇಕೆಂಬ ಕಾರಣಕ್ಕೆ ಇಂದು ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆನೆ ಎಂದು ಹೇಳಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಮಹಿಳಾ ಘಟಕದ ಅಧ್ಯಕ್ಷರಾದ ಶ್ವೇತಾ ಬಂಡಿ, ಮುಖಂಡರಾದ ಚೇತನ್ ಗೌಡ, ಶ್ರೀ ರಮೇಶ್ ಶೆಟ್ಟಿ, ಶ್ರೀ ಮೂಡಬ ರಾಘವೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow Us

Leave a Reply

Your email address will not be published. Required fields are marked *

Back to top button