ಎಸ್.ಎಸ್.ಎಲ್.ಸಿ ಪರೀಕ್ಷೆ-ಮೊದಲ ದಿನ ಸುಸೂತ್ರ!ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಿಎಂ|2,870 ಕೇಂದ್ರಗಳಲ್ಲಿ ನಡೆದ ಪರೀಕ್ಷೆ
ಮಲೆನಾಡು ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ನೊಂದಣಿಯಾಗಿದ್ದ 22,429 ವಿದ್ಯಾರ್ಥಿಗಳ ಪೈಕಿ 192 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ ನಡೆದ ಪರೀಕ್ಷೆಯಲ್ಲಿ ಶೂನ್ಯ ಡಿಬಾರ್ ಪ್ರಕರಣ ಕಂಡುಬಂದಿದೆ.

ಶಾಲಾ ಜೀವನದ ಅತ್ಯಂತ ಪ್ರಮುಖ ಹಂತ ಎಂದೇ ಪರಿಗಣಿಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ರಾಜ್ಯದಲ್ಲಿ ಬುಧವಾರದಿಂದ ಆರಂಭಗೊಂಡಿವೆ. ಮೊದಲ ದಿನದ ಪರೀಕ್ಷೆ ಯಾವುದೇ ಅಡೆ ತಡೆ ಇಲ್ಲದೇ ಸರಾಗವಾಗಿ ಸಾಗಿದ ಬಗ್ಗೆ ವರದಿಯಾಗಿದೆ.
ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಭಯ, ಆತಂಕವನ್ನು ದೂರ ಮಾಡಲು ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು ಕಂಡು ಬಂದಿದೆ.

ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಹಾಜರಾದ ವಿದ್ಯಾರ್ಥಿಗಳು ಸಂತಸ, ಖುಷಿಯಿಂದಲೇ ಪ್ರಶ್ನೆ ಪತ್ರಿಕೆಗೆ ಉತ್ತರಿಸಿದ್ದು ಕಂಡು ಬಂದೆ.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮಧು ಬಂಗಾರಪ್ಪ!
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಜ್ಜಾಗಿದ್ದ ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕೆಪಿಎಸ್ ಪರೀಕ್ಷಾ ಕೇಂದ್ರಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಬೆಳಗ್ಗೆ 9.30ರ ಸುಮಾರಿಗೆ ದಿಢೀರ ಭೇಟಿ ನೀಡಿದರು.


ಅಲ್ಲಿದ್ದ ವಿದ್ಯಾರ್ಥಿಗಳನ್ನು ಭೇಟಿಯಾದ ಅವರು, ಯಾವುದೇ ಆತಂಕ, ದುಗುಡವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ಧೈರ್ಯ ತುಂಬಿದರು. ಆತಂಕವಿಲ್ಲದೇ ಪರೀಕ್ಷೆ ಎದುರಿಸಲು ಸಲಹೆ ನೀಡಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರಲ್ಲದೇ ಗುಲಾಬಿ ನೀಡಿ ಪರೀಕ್ಷೆಗೆ ಆಲ್ ದಿ ಬೆಸ್ಟ್ ಹೇಳಿದರು.
ಸಚಿವರ ದಿಢೀರ ಭೇಟಿ ಮತ್ತು ಅವರು ಧೈರ್ಯ ತುಂಬುವ ಕೆಲಸ ಮಾಡಿದ್ದು ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ಮೂಡುವಂತೆ ಮಾಡಿತು.

ಇದೇ ವೇಳೆ ಮಲ್ಲೇಶ್ವರಂ ಪರೀಕ್ಷಾ ಕೇಂದ್ರದಲ್ಲಿನ ಪ್ರಶ್ನೆಪತ್ರಿಕೆ ಹಂಚಿಕೆ, ವಿತರಣೆ ಹಾಗೂ ಸಕಲ ವ್ಯವಸ್ಥೆಗಳನ್ನ ಖುದ್ದಾಗಿ ಪರಿಶೀಲಿಸಿ ಅಧಿಕಾರಿಗಳಿಂದ ಸಚಿವ ಮಧು ಬಂಗಾರಪ್ಪ ಮಾಹಿತಿ ಪಡೆದುಕೊಂಡರು.
ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಪಾರದರ್ಶಕ ಪರೀಕ್ಷೆ ನಡೆಸಲು ಕಟ್ಟು ನಿಟ್ಟಿನ ಜಾಗೃತೆ ಕ್ರಮವಹಿಸಲು ಸೂಚನೆ ನೀಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬುಧವಾರದ ಹೈಲೈಟ್ಸ್ :
*ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
*16 ಮಂದಿ ದೃಷ್ಟಿ ಮಾಂದ್ಯರು ಬರಹಗಾರರ ಸಹಾಯವಿಲ್ಲದೇ ಸ್ವತಃ ಲ್ಯಾಪ್‌ಟಾಪ್ ಬಳಸಿ ಪರೀಕ್ಷೆ ಬರೆದದ್ದು ಈ ಬಾರಿಯ ವಿಶೇಷ.
ಇನ್ನು ಪರೀಕ್ಷೆಗೆ 12,175 ವಿದ್ಯಾರ್ಥಿಗಳು ಗೈರು ಹಾಜರಾಗಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದಲ್ಲಿ ಪರೀಕ್ಷೆ ಯಶಸ್ವಿ!
ಮಲೆನಾಡು ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ನೊಂದಣಿಯಾಗಿದ್ದ 22,429 ವಿದ್ಯಾರ್ಥಿಗಳ ಪೈಕಿ 192 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ ನಡೆದ ಪರೀಕ್ಷೆಯಲ್ಲಿ ಶೂನ್ಯ ಡಿಬಾರ್ ಪ್ರಕರಣ ಕಂಡುಬಂದಿದೆ.
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಿದ್ದರಾಮಯ್ಯ!
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಹಾರೈಸಿದ್ದಾರೆ. ಭಯ, ಆತಂಕವಿಲ್ಲದೇ ಪರೀಕ್ಷೆ ಬರೆಯಿರಿ. ಮತ್ತೆ ಪರೀಕ್ಷೆ ಬರೆಯಲು ಅವಕಾಶವಿದೆ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಹೇಳಿದ್ದಾರೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.








