ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ|ಡಾ.ಚಂದ್ರಶೇಖರ್ ಅವರ ಸೇವಾ ಮನೋಭಾವ ಇತರರಿಗೆ ಮಾದರಿ-ವಾರ್ತಾಧಿಕಾರಿ ಆರ್ ಮಾರುತಿ ಶ್ಲಾಘನೆ
ಶಿವಮೊಗ್ಗ ನಗರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದ್ದು, ಆರೋಗ್ಯದ ಬಗ್ಗೆ ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾರ್ತಾಧಿಕಾರಿ ಆರ್ ಮಾರುತಿ ಅವರು ಸಲಹೆ ನೀಡಿದರು.

ಹಣವಂತರಿಗೆ ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾದ ಇಂದಿನ ಪರಿಸ್ಥಿತಿಯಲ್ಲಿ ಶಿವಮೊಗ್ಗದ ತೃಪ್ತಿ ಆಸ್ಪತ್ರೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡುತ್ತಿದೆ ಎಂದು ವಾರ್ತಾಧಿಕಾರಿ ಆರ್ ಮಾರುತಿ ಶ್ಲಾಘಿಸಿದ್ದಾರೆ.
ಶಿವಮೊಗ್ಗ ಪ್ರೆಸ್ಟ್ರಸ್ಟ್ ಹಾಗೂ ತೃಪ್ತಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ತೃಪ್ತಿ ಆಸ್ಪತ್ರೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತೃಪ್ತಿ ಆಸ್ಪತ್ರೆಯ ಡಾ.ಚಂದ್ರಶೇಖರ್ ಅವರು ಸೇವಾ ಮನೋಭಾವ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.
ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ಇರುವವರಿಗೆ ಮಾತ್ರ ಇಂತಹ ಕಾರ್ಯಗಳನ್ನು ನಡೆಸಲು ಸಮಯ ಸಿಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದ್ದು, ಆರೋಗ್ಯದ ಬಗ್ಗೆ ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾರ್ತಾಧಿಕಾರಿ ಆರ್ ಮಾರುತಿ ಅವರು ಸಲಹೆ ನೀಡಿದರು.

ಮೂತ್ರಕೋಶ, ಲಿವರ್, ಹೃದಯ ಇವುಗಳ ತಪಾಸಣೆಗೆ ಇತರೆ ಆಸ್ಪತ್ರೆಗಳಲ್ಲಿ ಸಾಕಷ್ಟು ಹಣ ಪಾವತಿ ಮಾಡಬೇಕಾಗುತ್ತದೆ. ಆದರೆ ತೃಪ್ತಿ ಆಸ್ಪತ್ರೆ ಇವುಗಳ ತಪಾಸಣೆಯನ್ನು ಉಚಿತವಾಗಿ ನಡೆಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದು ಹೇಳಿದರು.
ತೃಪ್ತಿ ಆಸ್ಪತ್ರೆಯ ಡಾ.ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಕನಸಾಗಿದೆ. ಈ ನಿಟ್ಟಿನಲ್ಲಿ ಉಚಿತ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡಿದ್ದೇನೆ.
ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಆದ್ದರಿಂದ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ದೊರಕಿಸಿ ಕೊಡುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಕಿಡ್ನಿ, ಲಿವರ್ ಹಾಗೂ ಹೃದಯದ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಆರೋಗ್ಯವಾಗಿರುತ್ತಾನೆ. ಇವುಗಳು ಉತ್ತಮವಾಗಿರಬೇಕಾದರೆ ಮಿತವಾದ ಆಹಾರ, ವ್ಯಾಯಾಮ ಮತ್ತು ನಡಿಗೆಯನ್ನು ಮಾಡಲೇಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಪ್ರೆಸ್ಟ್ರಸ್ಟ್ ಅಧ್ಯಕ್ಷ ಹಾಗು ಕ್ರಾಂತಿದೀಪ ದಿನಪತ್ರಿಕೆ ಸಂಪಾದಕ ಎನ್.ಮಂಜುನಾಥ್, ಶಿವಮೊಗ್ಗ ಪ್ರೆಸ್ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್, ಗೋ.ವಾ.ಮೋಹನಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







