DistrictShivamogga

ಮೆಸ್ಕಾಂ ಹಾಗು ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕ ಚೆನ್ನಬಸಪ್ಪ ಸಭೆ| ಸಾರ್ವಜನಿಕರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ-ತುರ್ತಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಕುಡಿಯುವ ನೀರಿನ ಸರಬರಾಜು ಸಂಬಂಧಿತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ಕ್ರಮಗಳ ಕುರಿತು ಶಾಸಕ ಚೆನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ ನಗರ ಶಾಸಕ ಎಸ್‌ ಎನ್‌ ಚೆನ್ನಬಸಪ್ಪ ಅವರು, ಶುಕ್ರವಾರದಂದು ತಮ್ಮ ಅಧಿಕೃತ ಕಚೇರಿ ‘ಕರ್ತವ್ಯ ಭವನ’ದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆ, ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದರು.

ನಗರದ ವಿವಿಧೆಡೆ ನಿಷ್ಕ್ರಿಯಗೊಂಡಿರುವ ವಿದ್ಯುತ್ ಕಂಬಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಹಾಗೂ ಕುಡಿಯುವ ನೀರಿನ ಸರಬರಾಜು ಸಂಬಂಧಿತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ಕ್ರಮಗಳ ಕುರಿತು ಶಾಸಕ ಚೆನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟವು ಆಯೋಜಿಸಿದ್ದ “ಕನ್ನಡ ಹಬ್ಬ 2025” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಚೇರಿ ಕಾರ್ಯವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮಾಡಬೇಕು ಎಂದು ಕರೆ ನೀಡಿದರು.

ನಮ್ಮ ಸಾಂಸ್ಕೃತಿಕ ಪರಿಚಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಮತ್ತು ಕಚೇರಿ ಕಾರ್ಯವ್ಯವಹಾರಗಳಲ್ಲಿ ಕನ್ನಡದ ಪ್ರಾಮುಖ್ಯತೆ ಕುರಿತು ಉದ್ಯೋಗಿಗಳು ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಇಂತಹ ಕನ್ನಡ ಪರ ಚಟುವಟಿಕೆಗಳು ಇನ್ನಷ್ಟು ಬೆಳೆವಂತಾಗಲಿ ಎಂಬ ಹಾರೈಸಿದ ಅವರು, ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಸಂಘಟಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

Follow Us

Leave a Reply

Your email address will not be published. Required fields are marked *

Back to top button