ದೇಶದಲ್ಲಿ ಭಾರಿ ಮಳೆ ನಿರೀಕ್ಷೆ-ಪ್ರವಾಹ, ಭೂಕುಸಿತದ ಎಚ್ಚರಿಕೆ-ಕನಾ೯ಟಕದ ಹಲವೆಡೆ ಐದು ದಿನಗಳ ಕಾಲ ಅಲಟ್೯
ನದಿಗಳ ಉಗಮ ಸ್ಥಾನ ಉತ್ತರಾಖಂಡದಲ್ಲಿ ಭಾರೀ ಮಳೆಯಾದರೆ ಅನೇಕ ನದಿಗಳು ಪ್ರವಾಹಕ್ಕೆ ಒಳಗಾಗುತ್ತವೆ ಇದರಿಂದ ಕೆಳಗಿರುವ ನಗರಗಳು ಮತ್ತು ಪಟ್ಟಣಗಳ ಮೇಲೆ ತೀವ್ರ ಪರಿಣಾಮ ಉಂಟಾಗಲಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ದೇಶದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದ್ದು, ಇದರಿಂದ ಪ್ರವಾಹ, ಭೂಕುಸಿತದ ಸಾಧ್ಯತೆ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು, ಸೆಪ್ಟೆಂಬರ್ನಲ್ಲೂ ಇದು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಭಾಗಿಯಾಗಿ ತಿಳಿಸಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಮಾಸಿಕ ಸರಾಸರಿ ಮಳೆಯು ದೀರ್ಘಾವಧಿಯ ಸರಾಸರಿ 167.9 ಮಿಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದು ಮುನ್ಸೂಚನೆ ನೀಡಿದೆ.
ಇದೇ ವೇಳೆ ಈಶಾನ್ಯ ಮತ್ತು ಪೂರ್ವದ ಕೆಲವು ಪ್ರದೇಶಗಳು, ದಕ್ಷಿಣ ಪರ್ಯಾಯ ದ್ವೀಪ ಸೇರಿದಂತೆ ಭಾರತದ ಅನೇಕ ಭಾಗಗಳು ಹಾಗೂ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ಈ ತಿಂಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆ, ಭೂಕುಸಿತ ಮತ್ತು ಹಠಾತ್ ಪ್ರವಾಹದ ಲಕ್ಷಣಗಳು ಹೆಚ್ಚಿವೆ. ದಕ್ಷಿಣ ಹರಿಯಾಣ, ದೆಹಲಿ ಮತ್ತು ಉತ್ತರ ರಾಜಸ್ಥಾನದಲ್ಲ ಮಳೆ ಆಗಲಿದೆ ಎಂದು ಎಚ್ಚರಿಸಿದ್ದಾರೆ.
ನದಿಗಳ ಉಗಮ ಸ್ಥಾನ ಉತ್ತರಾಖಂಡದಲ್ಲಿ ಭಾರೀ ಮಳೆಯಾದರೆ ಅನೇಕ ನದಿಗಳು ಪ್ರವಾಹಕ್ಕೆ ಒಳಗಾಗುತ್ತವೆ ಇದರಿಂದ ಕೆಳಗಿರುವ ನಗರಗಳು ಮತ್ತು ಪಟ್ಟಣಗಳ ಮೇಲೆ ತೀವ್ರ ಪರಿಣಾಮ ಉಂಟಾಗಲಿದೆ. ಜನರು ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಕನಾ೯ಟಕದಲ್ಲಿಯು ಭಾರಿ ಮಳೆ ನಿರೀಕ್ಷೆ:
ಉತ್ತರ ಭಾರತದ ಜೊತೆ ರಾಜ್ಯದಲ್ಲಿಯು ಸೆಪ್ಟೆಂಬರ ತಿಂಗಳಿನಲ್ಲಿ ಭಾರಿ ಮಳೆಯ ಆಭ೯ಟ ಉಂಟಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳು ಭಾರಿ ಮಳೆ ನಿರೀಕ್ಷೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಉಭಯ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲಟ್೯ ಘೋಷಿಸಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ನಿರೀಕ್ಷೆ ಇರುವದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಸೆಪ್ಟೆಂಬರ್ 6ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.


