ಏಪ್ರಿಲ್,ಮೇನಲ್ಲಿ ಜಿಲ್ಲಾ,ತಾಲೂಕು ಪಂಚಾಯತ್ ಚುನಾವಣೆ|ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆ-ಚುನಾವಣೆಗೆ ಕಾಂಗ್ರೆಸ್ ಪಕ್ಷ ಸನ್ನದ್ಧ-ಸಲೀಂ ಅಹ್ಮದ್
ನರೇಗಾ ಯೋಜನೆಯಿಂದ ಗಾಂಧೀ ಹೆಸರು ಕಿತ್ತಾಕಿದ ಬಿಜೆಪಿ ಪಕ್ಷಕ್ಕೆ ಭವಿಷ್ಯದಲ್ಲಿ ಗಾಂಧೀ ಪ್ರತಿಮೆ ಮುಂದೆ ಹೋರಾಟ ಮಾಡುವ ಯಾವ ನೈತಿಕತೆಯೂ ಇಲ್ಲ ಎಂದು ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮಾಗಾಂಧಿಯವರನ್ನು ನಾಥೂರಾಮ್ ಗೋಡ್ಸೆ ಕೊಂದರೇ, ನರೇಗಾ ಯೋಜನೆಯಿಂದ ಗಾಂಧಿಜೀಯವರ ಹೆಸರು ಕೈಬಿಡುವ ಮೂಲಕ ಕೇಂದ್ರ ಸರ್ಕಾರವು ಗಾಂಧಿಜೀಯವರ ಚಿಂತನೆ ಹಾಗೂ ವಿಚಾರಧಾರೆಗಳನ್ನು ಬಲಿ ಕೊಟ್ಟಿದೆ ಎಂದು ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರದಂದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ನರೇಗಾ ಕಾರ್ಯಕ್ರಮ ನಡೆದುಕೊಂಡು ಬಂದಿದೆ.
ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂದು 12 ವರ್ಷಗಳ ಬಳಿಕ ಕಾರ್ಯಕ್ರಮದ ಹೆಸರು ಬದಲಾಯಿಸಲು ಹೊರಟಿದೆ. ನರೇಗಾದಲ್ಲಿ ಅಕ್ರಮ ನಡೆಯುತ್ತಿದೆ ಅಂತ ಈಗ ಜ್ಞಾನೋದಯವಾಯ್ತಾ? ಇಷ್ಟು ವರ್ಷ ಸುಮ್ಮನೆ ಇದ್ದದ್ದು ಏಕೆ ಎಂದು ಪ್ರಶ್ನಿಸಿದರು.
ನರೇಗಾ ಯೋಜನೆಯಿಂದ ಗಾಂಧೀ ಹೆಸರು ಕಿತ್ತಾಕಿದ ಬಿಜೆಪಿ ಪಕ್ಷಕ್ಕೆ ಭವಿಷ್ಯದಲ್ಲಿ ಗಾಂಧೀ ಪ್ರತಿಮೆ ಮುಂದೆ ಹೋರಾಟ ಮಾಡುವ ಯಾವ ನೈತಿಕತೆಯೂ ಇಲ್ಲ ಎಂದು ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಇನ್ನೂ ಹಾವೇರಿಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ನಿವೇಶನ ಪತ್ರ ನೀಡುವ ಬೃಹತ್ ಕಾರ್ಯಕ್ರಮ ಫೆಬ್ರವರಿ 13 ರಂದು ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಸಲೀಅಹ್ಮದ್ ತಿಳಿಸಿದರು.
ಏಪ್ರಿಲ್ ಮೇನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಾಧ್ಯತೆ ಇದೆ. ನಮ್ಮ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಿದೆ.
ನುಡಿದಂತೆ ನಡೆದಿದ್ದೇವೆ ಶಕ್ತಿ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಲ್ಲ ವರ್ಗಕ್ಕೂ ಅನುಕೂಲಕರ ಯೋಜನೆಗಳನ್ನ ಕಾಂಗ್ರೆಸ್ ಸರ್ಕಾರ ನೀಡಿದೆ ಹಾಗಾಗಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ದವಾಗಿದೆ ಎಂದರು.
ಕೇಂದ್ರ ಸರ್ಕಾರದಲ್ಲಿ ರಾಜ್ಯದ 12 ಕ್ಕೂ ಹೆಚ್ಚು ಬಿಜೆಪಿ ಸಂಸದರು , ಐದು ಸಚಿವರುಗಳು ಇದ್ದರೂ ರಾಜ್ಯಕ್ಕೆ ಬೇಕಾದ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಸಲೀಂ ಅಹ್ಮದ ಆರೋಪಿಸಿದರು.
ಪ್ರಧಾನಿ ಮುಂದೆ ನಿಂತು ಮಾತಾಡುವ ಧೈರ್ಯವಿಲ್ಲ. ಇದರಿಂದ ಸಹಜವಾಗಿ ಅಭಿವೃದ್ಧಿ ಕುಂಠಿತಗೊಂಡಿದೆ. ಮಹದಾಯಿ ಯೋಜನೆ ಮೇಕೆದಾಟು ಯೋಜನೆಗಳಿಗೆ ಅಗತ್ಯ ಪ್ರಯತ್ನ ಬಿಜೆಪಿ ಸಂಸದರು ಕೇಂದ್ರ ಸಚಿವರುಗಳಿಂದ ಆಗುತ್ತಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







