DistrictShivamogga
ತೀರ್ಥಹಳ್ಳಿಯ ಬೆಜ್ಜವಳ್ಳಿಗೆ ನಟ ಶಿವರಾಜ್ಕುಮಾರ್ ದಂಪತಿ|ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಪೂಜೆ ಸಲ್ಲಿಸಿದ ಹ್ಯಾಟ್ರಿಕ್ ಹೀರೋ|
ಮಾಲೆ ಧರಿಸಿ, ಇರುಮುಡಿ ಕಟ್ಟಿ ದೇವಸ್ಥಾನಕ್ಕೆ ಆಗಮಿಸಿದ್ದ ನಟ ಶಿವರಾಜ್ಕುಮಾರ್ ದಂಪತಿ ಗರುಡ ದರ್ಶನ ಪಡೆದರು.

ಚಿತ್ರನಟ ಡಾ. ಶಿವರಾಜ್ಕುಮಾರ್ ಹಾಗೂ ಶ್ರೀಮತಿ ಗೀತಾ ಶಿವರಾಜ್ಕುಮಾರ ಅವರು ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಾಲೆ ಧರಿಸಿ, ಇರುಮುಡಿ ಕಟ್ಟಿ ದೇವಸ್ಥಾನಕ್ಕೆ ಆಗಮಿಸಿದ್ದ ನಟ ಶಿವರಾಜ್ಕುಮಾರ್ ದಂಪತಿ ಗರುಡ ದರ್ಶನ ಪಡೆದರು.

ಬಳಿಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅವರು, ಅಯ್ಯಪ್ಪ ಸ್ವಾಮಿಯ ದಿವ್ಯ ದರ್ಶನ ಪಡೆದರು. ಅವಧೂತ ವಿನಯ ಗುರೂಜಿ ಉಪಸ್ಥಿತರಿದ್ದರು.

ಇದೇ ವೇಳೆ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮ ನಡೆಯಿತು. ತಮ್ಮ ಮೆಚ್ಚಿನ ನಟನನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.
ವರದಿ: ನ್ಯೂಸ್ ಡೆಸ್ಕ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.







