DistrictKarnatakaPoliticalShivamoggaSpecial Stories

Shivmogga-ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು-ಶಾಸಕ ಚೆನ್ನಬಸಪ್ಪ

ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ಬಳಸಬೇಕಾದ ಅಗತ್ಯವಿದೆ ಎಂದು ಎಸ್.ಎನ್.ಚನ್ನಬಸಪ್ಪ ಹೇಳಿದರು.

ಭಾರತದ ಭವ್ಯ ಭವಿಷ್ಯ ನಿಂತಿರುವುದು ಪ್ರಜಾಪ್ರಭುತ್ವದ ತಳಹದಿಯ ಮೇಲೆ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ . ಪ್ರಜಾಪ್ರಭುತ್ವ ಎಲ್ಲಾ ನಾಗರೀಕರ ಹಕ್ಕು ಪಾಲ್ಗೊಳ್ಳುವಿಕೆಯನ್ನು ಪ್ರತಿಪಾದಿಸುತ್ತದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚೆನ್ನಬಸಪ್ಪ ಹೇಳಿದ್ದಾರೆ.

ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಆವರಣದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ನಮ್ಮನ್ನಾಳುವ ಸರ್ಕಾರದ‌ ಪಾತ್ರ ಎತ್ತಿತೋರಿಸಲು,ಶಾಂತಿ, ಅಭಿವೃದ್ದಿ, ನ್ಯಾಯ, ಮಾನವಹಕ್ಕುಗಳನ್ನ ತಲುಪಿಸಲು,ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು ಎಂದು ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ಬಳಸಬೇಕಾದ ಅಗತ್ಯವಿದೆ ಎಂದು ಎಸ್.ಎನ್.ಚನ್ನಬಸಪ್ಪ ಹೇಳಿದರು.

ನಮ್ಮನ್ನಾಳುವ ಸರ್ಕಾರಗಳ ಪಾತ್ರವನ್ನು ಎತ್ತಿ ತೋರಿಸಲು, ನ್ಯಾಯ, ಶಾಂತಿ, ಅಭಿವೃದ್ಧಿ ಮತ್ತು ಮಾನವ ಹಕ್ಕುಗಳನ್ನು ತಲುಪಿಸುವಲ್ಲಿ ಇದು ಸದವಕಾಶವಾಗಿರಲಿದೆ ಎಂದು ಶಾಸಕ ಚೆನ್ನಬಸಪ್ಪ ತಿಳಿಸಿದರು.

ಬಳಿಕ, ವಿಧಾನಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ದೇಶದ ಪ್ರತಿಯೊಬ್ಬ ನಾಗರೀಕರು ತಮ್ಮ ಹಕ್ಕುಗಳನ್ನು ಬಳಸಿಕೊಳ್ಳುವಂತೆಯೇ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಮರ್ಥ ಜನನಾಯಕನನ್ನು ಆಯ್ಕೆಗೊಳಿಸುವಲ್ಲಿ ಎಲ್ಲರೂ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ ಅವರು, ಮತ ಚಲಾಯಿಸದವರಿಗೆ ಸರ್ಕಾರದ ಯಾವುದೇ ಸೌಲಭ್ಯವನ್ನು ನೀಡದಿರುವ ಕಾನೂನು ಜಾರಿಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್‌ಸದಸ್ಯ ಡಾ.ಧನಂಜಯ ಸರ್ಜಿ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ದೇಶದ ಬೆಳವಣಿಗೆಯನ್ನು ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಇದುವೇ ಭಾರತದ ಸುವರ್ಣಕಾಲ, ವಿಶ್ವಗುರುವಾಗುವ ಪುಣ್ಯಕಾಲ ಎಂದು ಹೇಳಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು.

ಸೈಕಲ್ ಜಾಥಾದಲ್ಲಿ ಭಾಗವಹಿಸಿದವರಿಗೆ ಈ ಸಂದಭ೯ದಲ್ಲಿ ಅಭಿನಂದಿಸಲಾಯಿತು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ, ಉಪನ್ಯಾಸಕ ಸುರೇಶ್‌ಲಮಾಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button