
ಮಹಾಭಾರತದ ಯುದ್ಧದ ಸಂದರ್ಭದಲ್ಲಿ ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವಾದ ಇಂದು ದೇಶದೆಲ್ಲದೆ ಗೀತಾ ಜಯಂತಿ ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಗೀತಾ ಜಯಂತಿಯ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ “ಗೀತಾ ಜಯಂತಿ”ಯ ಈ ಶುಭ ಸಂದರ್ಭದಲ್ಲಿ ದೇಶಾದ್ಯಂತ ನನ್ನ ಕುಟುಂಬಕ್ಕೆ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಕರ್ತವ್ಯ ಪಾಲನೆಯ ಅಮೂಲ್ಯ ಸಂದೇಶಗಳಿಂದ ಅಲಂಕರಿಸಲ್ಪಟ್ಟ ಈ ದೈವಿಕ ಪುಸ್ತಕವು, ಭಾರತೀಯ ಕುಟುಂಬ ಹಾಗು ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಬಹಳ ವಿಶಿಷ್ಟ ಸ್ಥಾನವನ್ನು ಹೊಂದಿದೆ.
ದೈವಿಕ ವಚನಗಳು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತಲೇ ಇರುತ್ತವೆ. ಜೈ ಶ್ರೀ ಕೃಷ್ಣ!

ಇನ್ನು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಸಹ ನಾಡಿನ ಸಮಸ್ತ ಜನತೆಗೆ ಗೀತಾ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.

ಅವರು ತಮ್ಮ ಸಂದೇಶದಲ್ಲಿ “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ । ಮಾ ಕರ್ಮಫಲ ಹೇತುರ್ಭೂ ll ಮಾ ತೇ ಸಂಗೋಸ್ತ್ವ ಕರ್ಮಣಿ ।। ಮಹಾಭಾರತದ ಯುದ್ಧದ ಸಂದರ್ಭದಲ್ಲಿ ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನ. ನಾಡಿನ ಸಮಸ್ತ ಜನತೆಗೆ ಗೀತಾ ಜಯಂತಿ ಶುಭಾಶಯಗಳು.
ವರದಿ: ನ್ಯಾಷನಲ್ ಡೆಸ್ಕ್
ನ್ಯೂಇಂಡಿಯಾ ಕನ್ನಡ
ಬೆಂಗಳೂರು.






