Bengaluru UrbanDistrictEducationKarnatakaShivamoggaSpecial StoriesState
Trending

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗೆ ಅಸ್ತು| ಪ್ರಸಕ್ತ ವರುಷದಿಂದಲೇ 4056 ಶಾಲೆಗಳಲ್ಲಿ ಆರಂಭ-ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ಕನ್ನಡ ಮತ್ತು ಇಂಗ್ಲೀಷ್‌ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂಬ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಪ್ರಸಕ್ತ ವರುಷದಿಂದಲೇ ಈ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರದಂದು ಪ್ರಕಟಿಸಿದ್ದಾರೆ.

ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ , ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದೆ.

ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ಕನ್ನಡ ಮತ್ತು ಇಂಗ್ಲೀಷ್‌ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಲ್‌.ಕೆ.ಜಿ, ಯು.ಕೆ.ಜಿ ಅಭ್ಯಾಸ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button