ಪ್ರಧಾನಿ ಮೋದಿ ಜನ್ಮದಿನಾಚರಣೆ – “ಸೇವಾ ಪಾಕ್ಷಿಕ ಅಭಿಯಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಚಾಲನೆ-ರಕ್ತದಾನ ಮಾಡಿದ ಡಾ.ಧನಂಜಯ ಸಜಿ೯
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿಗೆ ಬಂದ ದಿನದಿಂದ ಅವರ ಹುಟ್ಟು ಹಬ್ಬವನ್ನು ಅತ್ಯಂತ ಅರ್ಥಗರ್ಭಿತವಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆ ರೂಪಿಸಲಾತ್ತಿದೆ ಎಂದು ಬಿ ವೈ ರಾಘವೇಂದ್ರ ತಿಳಿಸಿದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆ ವಿವಿದೆಡೆ ಹಲವು ಕಾಯ೯ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
“ಸೇವಾ ಪಾಕ್ಷಿಕ” ಅಭಿಯಾನದಡಿಯಲ್ಲಿ ತೀರ್ಥಹಳ್ಳಿ ರಸ್ತೆಯಲ್ಲಿರುವ “ನಾರಾಯಣ ಹೃದಯಾಲಯ” ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ “ಸ್ವಸ್ಥ ನಾರಿ – ಸಶಕ್ತ ಪರಿವಾರ” ಅಡಿಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಸಂಸದ ಬಿ ವೈ ರಾಘವೇಂದ್ರ ಬುಧವಾರದಂದು ಚಾಲನೆ ನೀಡಿದರು.

ಮಹಿಳೆಯರಿಗೆ ಉತ್ತಮ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಜೊತೆಗೆ ಆರೋಗ್ಯದ ಕಾಳಜಿ ನೀಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಈ ಸಂದಭ೯ದಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿಗೆ ಬಂದ ದಿನದಿಂದ ಅವರ ಹುಟ್ಟು ಹಬ್ಬವನ್ನು ಅತ್ಯಂತ ಅರ್ಥಗರ್ಭಿತವಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆ ರೂಪಿಸಲಾತ್ತಿದೆ ಎಂದು ಬಿ ವೈ ರಾಘವೇಂದ್ರ ತಿಳಿಸಿದರು.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರ ಕರೆಯ ಮೇರೆಗೆ ಬಿಜೆಪಿ ಶಿವಮೊಗ್ಗ ಇಂದಿನಿಂದ ಅಕ್ಟೋಬರ್ 02 ರ ಗಾಂಧಿ ಜಯಂತಿಯ ವರೆಗೆ ಸಾರ್ವಜನಿಕರಿಗೆ ಉಪಯುಕ್ತವಾಗುವ ವಿವಿಧ ರೀತಿಯ ಸಾಮಾಜಿಕ ಕಾರ್ಯಗಳು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ವಿಶೇಷವಾಗಿ ನಡೆಸಲು ಯೋಜನೆ ಸಿದ್ಧಪಡಿಸಿದೆ ಎಂದು ಹೇಳಿದರು.
ತುಂಗಾ ನಗರ ಹೆರಿಗೆ ಆಸ್ಪತ್ರೆ ಆವರಣ
“ಸ್ವಸ್ಥ ನಾರಿ – ಸಶಕ್ತ ಭಾರತ” ಅಭಿಯಾನ
ಇನ್ನು ಶಿವಮೊಗ್ಗದ ತುಂಗಾ ನಗರ ಹೆರಿಗೆ ಆಸ್ಪತ್ರೆ ಆವರಣದಲ್ಲಿ “ಸ್ವಸ್ಥ ನಾರಿ – ಸಶಕ್ತ ಭಾರತ” ಅಭಿಯಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದರು.

ಮಹಿಳೆಯರ ಮಾನಸಿಕ ಆರೋಗ್ಯ ಸೇವೆ, ಗರ್ಭಿಣಿ ಸ್ತ್ರೀಯರಿಗೆ ಮಾರ್ಗದರ್ಶನ ನೀಡುವುದು, ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವುದು ಈ ಅಭಿಯಾನದಲ್ಲಿ ಒಳಗೊಂಡಿದೆ ಎಂದು ಅವರು ವಿವರಿಸಿದರು.

ಕುಟುಂಬದ ಸಂಪೂರ್ಣ ಹೊಣೆಗಾರಿಕೆಯನ್ನ ಹೊತ್ತು ಕಾಳಜಿಯಿಂದ ನಿಭಾಯಿಸುವ ಮಹಿಳೆಯರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ ಇದರ ಪೂರ್ಣ ಸದುಪಯೋಗಕ್ಕೆ ಸಂಸದ ಬಿ ವೈ ರಾಘವೇಂದ್ರ ಕರೆ ನೀಡಿದರು.
ಇಂದಿನ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ಸೂಕ್ತ ಸಲಹೆ ಸೂಚನೆ ಮುಂಜಾಗ್ರತಾ ಕ್ರಮಗಳ ಮಾಹಿತಿಯನ್ನು ನೂರಾರು ಮಹಿಳೆಯರು ಪಡೆದುಕೊಂಡರು.
ಭದ್ರಾವತಿ-ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಶಾಸಕ ಡಾ.ಧನಂಜಯ ಸರ್ಜಿ ಸತತ 68 ನೇ ಬಾರಿ ರಕ್ತದಾನ
ಭದ್ರಾವತಿ ನಗರದಲ್ಲಿ ನಗರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಸತತ 68 ನೇ ಬಾರಿ ರಕ್ತದಾನವನ್ನು ಮಾಡಿ ಮಾದರಿಯಾದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಕೂಡ ರಕ್ತದಾನ ಮಾಡಿದರು.

ಶಿಬಿರದಲ್ಲಿ ಭದ್ರಾವತಿ ನಗರ ಮಂಡಲ ಅಧ್ಯಕ್ಷರಾದ ಧರ್ಮಪ್ರಸಾದ್ , ಶಿವಮೊಗ್ಗ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಆನಂದ್ , ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್ , ರಕ್ತದಾನ ಶಿಬಿರ ಸಂಚಾಲಕರಾದ ಧನುಷ್ , ನಗರಸಭಾ ಸದಸ್ಯರಾದ ಅನುಪಮಾ ಚನ್ನೇಶ್ , ಪ್ರಮುಖರಾದ ಶಿವಕುಮಾರ್, ಚನ್ನೇಶ್ , ರಘುರಾಮ್, ಮಂಜಣ್ಣ ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.
ವರದಿ: ಸೌಮ್ಯ ರೆಡ್ಡಿ,
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.


