Bengaluru UrbanDistrictKarnatakaPoliticalSpecial Stories

ಅನಹ೯ರ ಬಿಪಿಎಲ್‌ ಕಾಡ್‌೯ ರದ್ದುಪಡಿಸಲು ಸಿಎಂ ಖಡಕ ತಾಕೀತು- “ಗ್ರಾಮ ಪಂಚಾಯಿತಿಗಳ ನಡೆ ಫಲಾನುಭವಿಗಳ ಕಡೆ”-ಸಿದ್ದರಾಮಯ್ಯ

ಪಂಚ ಗ್ಯಾರಂಟಿ ಯೋಜನೆಗಳ ಅಹವಾಲು ಸ್ವೀಕರಿಸುವ ಉದ್ದೇಶದೊಂದಿಗೆ "ಗ್ರಾಮ ಪಂಚಾಯಿತಿಗಳ ನಡೆ ಫಲಾನುಭವಿಗಳ ಕಡೆ" ಎಂಬ ವಿಶಿಷ್ಠ ಕಾಯ೯ಕ್ರಮ ಹಮ್ಮಿಕೊಳ್ಳಲು ರಾಜ್ಯ ಸಕಾ೯ರ ನಿಧ೯ರಿಸಿದೆ ಎಂದ ಸಿಎಂ, ಪ್ರತಿಯೊಬ್ಬ ಅಹ೯ರಿಗೆ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಅನರ್ಹರನ್ನು ಗುರುತಿಸಿ ಅಂತಹವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿಯೇ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಇರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಸಿಎಂ ಅಧಿಕೃತ ಗೃಹ ಕಚೇರಿ “ಕೃಷ್ಣಾ”ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರದಂದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ ಅನ್ನು ಖಚು೯ ಮಾಡಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

  • ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಸಿಎಂ ಖಡಕ ಸೂಚನೆ ನೀಡಿದರು.
  • ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು.
  • ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.
  • ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು ಎಂದು ತಿಳಿಸಿದರು.
  • ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಪ್ರಯಾಣದ ಬಗ್ಗೆ “ಗೋಲ್ಡನ್‌ ಬುಕ್‌ ವಲ್ಡ್‌೯ ರೆಕಾಡ್ಸ್‌೯ನಲ್ಲಿ ದಾಖಲಾದ ಪ್ರಮಾಣಪತ್ರ ತೋರಿಸುತ್ತಿರುವ ಸಚಿವ ರಾಮಲಿಂಗಾರೆಡ್ಡಿ

ಇನ್ನು ಪಂಚ ಗ್ಯಾರಂಟಿ ಯೋಜನೆಗಳ ಅಹವಾಲು ಸ್ವೀಕರಿಸುವ ಉದ್ದೇಶದೊಂದಿಗೆ “ಗ್ರಾಮ ಪಂಚಾಯಿತಿಗಳ ನಡೆ ಫಲಾನುಭವಿಗಳ ಕಡೆ” ಎಂಬ ವಿಶಿಷ್ಠ ಕಾಯ೯ಕ್ರಮ ಹಮ್ಮಿಕೊಳ್ಳಲು ರಾಜ್ಯ ಸಕಾ೯ರ ನಿಧ೯ರಿಸಿದೆ ಎಂದ ಸಿಎಂ, ಪ್ರತಿಯೊಬ್ಬ ಅಹ೯ರಿಗೆ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವ ರಾಮಲಿಂಗಾ ರೆಡ್ಡಿ, ಇಂಧನ ಸಚಿವ ಕೆ ಜೆ ಜಾಜ್‌೯, ಮುಖ್ಯ ಕಾಯ೯ದಶಿ೯ ಶಾಲಿನಿ ರಜನೀಶ, ಗ್ಯಾರಂಟಿ ಅನುಷ್ಠಾನ ರಾಜ್ಯ ಅಧ್ಯಕ್ಷ ಎಚ್‌ ಎಂ ರೇವಣ್ಣ, ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button