Shivamogga

ಯುಪಿಎ ಅವಧಿಯಲ್ಲೇ ಕಸ್ತೂರಿರಂಗನ್‌ ವರದಿಗೆ ಚಾಲನೆ|ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ ಪ್ರತಿಭಟನೆ|ಕೇಂದ್ರದ ವಿರುದ್ದ ದೂಷಣೆ ಸಲ್ಲ-ಆರಗ ಜ್ಞಾನೇಂದ್ರ

ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸಭೆ ವಿಶೇಷ ಅಧಿವೇಶನ ಕರೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಆರಗ್‌ ಜ್ಞಾನೇಂದ್ರ ಸ್ವಾಗತಿಸಿದರು.

ಶಿವಮೊಗ್ಗ: ಗಾಡ್ಗಿಲ್ ಹಾಗೂ ಕಸ್ತೂರಿ ರಂಗನ್ ವರದಿಗಳಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲೇ ಚಾಲನೆ ನೀಡಲಾಗಿತ್ತು.

ಅಂದು ಸುಮ್ಮನಿದ್ದ ಕಾಂಗ್ರೆಸ್‌ ನಾಯಕರು ಈಗ ರಾಜಕೀಯ ಲಾಭಕೋಸ್ಕರ ಪ್ರತಿಭಟನೆ, ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಗುರವಾರದಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಪಶ್ಚಿಮ ಘಟ್ಟದ ಪರಿಸರ ಸಂರಕ್ಷಣೆ ಹಾಗೂ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷಾತೀತವಾಗಿ ಚರ್ಚೆ ನಡೆಸಬೇಕಿದೆ ಎಂದು ಹೇಳಿದರು.

ಪಶ್ಚಿಮ ಘಟ್ಟದ ನಿವಾಸಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಈ ಹಿಂದೆ ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದ ಅವಧಿಯಲ್ಲೇ ಗಾಡ್ಗಿಲ್ ಹಾಗೂ ಕಸ್ತೂರಿ ರಂಗನ್ ವರದಿಗಳು ಬಂದಿದ್ದವು.

ಆಗ ಮೌನವಾಗಿದ್ದ ಕಿಮ್ಮನೆ ರತ್ನಾಕರ್ ಅವರು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈಗ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ಆರೋಪಿಸಿದರು.

ಕಸ್ತೂರಿ ರಂಗನ್ ವರದಿ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಷ್ಟು ಅಧ್ಯಯನ ಮಾಡಿದ್ದಾರೆ ಎಂಬುದು ಪ್ರಶ್ನೆ ಕಾಡುತ್ತಿದೆ.

ಈ ವಿಚಾರದಲ್ಲಿ ಸಚಿವರು ಮಾತನಾಡುವ ಮುನ್ನ ಸಮಗ್ರ ಅಧ್ಯಯನ ಮಾಡುವುದು ಸೂಕ್ತ ಎಂದು ಹೇಳಿರುವ ಆರಗ ಜ್ಞಾನೇಂದ್ರ , ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮಧು ಬಂಗಾರಪ್ಪನವರಿಗೆ ಸಲಹೆ ನೀಡಿದರು.

ಕೇರಳ ರಾಜ್ಯದಲ್ಲಿನ ಮಾದರಿಯಂತೇ ಪಶ್ಚಿಮ ಘಟ್ಟದ ಯಾವ ಪ್ರದೇಶಗಳನ್ನು ಕಸ್ತೂರಿ ರಂಗನ್‌ ವರದಿಯ ವ್ಯಾಪ್ತಿಗೆ ಸೇರಿಸಬೇಕು ಮತ್ತು ಯಾವುದನ್ನು ಹೊರಗಿಡಬೇಕು ಎಂಬುದರ ಕುರಿತು ರಾಜ್ಯ ಸರ್ಕಾರ ಸಮಗ್ರ ವರದಿ ಸಿದ್ಧಪಡಿಸಿ ಮೊದಲು ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಆರಗ ಜ್ಞಾನೇಂದ್ರ ಆಗ್ರಹಿಸಿದರು.

ರಾಜ್ಯ ಸರ್ಕಾರವು ಆ ಕೆಲಸ ಮಾಡುವದನ್ನು ಬಿಟ್ಟು ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸಭೆ ವಿಶೇಷ ಅಧಿವೇಶನ ಕರೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಆರಗ ಜ್ಞಾನೇಂದ್ರ ಸ್ವಾಗತಿಸಿದರು.

ಪಕ್ಷಾತೀತವಾಗಿ ನಿರ್ಧಾರ ಕೈಗೊಳ್ಳುವ ವಿಚಾರದಲ್ಲಿ ನಮ್ಮ ಬೆಂಬಲ ಇದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇನ್ನು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಆಡಳಿತದಲ್ಲಿ ಗಮನಾರ್ಹ ಸಾಧನೆ ಕಾಣುತ್ತಿಲ್ಲ ಎಂದರು.

ಮತದಾರರು ನೀಡಿದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಲಂಚಗುಳಿತನ ಮತ್ತು ಭ್ರಷ್ಟಾಚಾರಕ್ಕೆ ಸರ್ಕಾರದಲ್ಲಿ ಅವಕಾಶ ನೀಡಲಾಗಿದೆ ಎಂದು ಆರಗ ಜ್ಞಾನೇಂದ್ರ ಆರೋಪಿಸಿದರು.

ಬಳ್ಳಾರಿ ಪಾದಯಾತ್ರೆ ರಾಜ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಪಾದಯಾತ್ರೆಯು, ಜನಾಕ್ರೋಶದ ಯಾತ್ರೆಯಾಗಿ ಪರಿವರ್ತನೆಯಾಗಿದೆ ಎಂದರು.

ಬರಗಾಲ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ವಿಚಾರದಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ನಡೆಸಿದ ಹೋರಾಟಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಗ್ರಾಮಾಂತರ ಪ್ರಧಾನ‌ ಕಾರ್ಯದರ್ಶಿ ಗಣೇಶ್ ಇದ್ದರು.

Follow Us

Leave a Reply

Your email address will not be published. Required fields are marked *

Back to top button