NationalNew Delhi

Delhi:ವಾಯು ಮಾಲಿನ್ಯದಿಂದ ಕಾಯಿಲೆ ಉಲ್ಬಣ|”ಹವಾಮಾನ ಆನಂದಿಸಿ”ಎಂದ ಮೋದಿ|ಸರ್ಕಾರದ ವೈಫಲ್ಯ ಖಂಡಿಸಿ,ಕಾಂಗ್ರೆಸ್‌ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನರು ಅನುಭವಿಸುತ್ತಿರುವ ಕಷ್ಟ ಕಾಣುತ್ತಿಲ್ಲ. ಪ್ರತಿ ವರುಷ ದೆಹಲಿಯಲ್ಲಿ ಇದೇ ಪರಿಸ್ಥಿತಿ ಇದೆ. ಇದು ರಾಜಕೀಯ ವಿಷಯವಲ್ಲ. ಜನರ ಆರೋಗ್ಯದ ಪ್ರಶ್ನೆಯಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ದೆಹಲಿಯಲ್ಲಿ ಉಂಟಾಗಿರುವ ತೀವ್ರ ಮಾಲಿನ್ಯದಿಂದ ಜನರು ಉಸಿರಾಡಲು ತೊಂದರೆ ಪಡುತ್ತಿದ್ದಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಹವಮಾನದ ಮಜಾ ಅನುಭವಿಸಿ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವದು ಖಂಡನೀಯ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಗುರುವಾರದಂದು ಸಂಸತ್ತಿನ ಆವರಣದಲ್ಲಿ ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟಲು ಸರ್ಕಾರ ವಿಫಲಗೊಂಡಿದೆ ಎಂದು ಆರೋಪಿಸಿ ನಡೆದ ಪ್ರತಿಭಟನಾ ಧರಣಿಯಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು.

ಹದೆಗೆಟ್ಟ ಮಾಲಿನ್ಯದಿಂದ ಚಿಕ್ಕಮಕ್ಕಳು ಹಾಗು ವೃದ್ದರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ.

ಆದರೆ ಮೋದಿಯವರು, ಈ ಹವಾಮಾನವನ್ನು ಆನಂದಿಸಿ, ಮಜಾ ಮಾಡಿ ಎಂದು ಸಂವೇದನಾರಹಿತರಾಗಿ ಹೇಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನರು ಅನುಭವಿಸುತ್ತಿರುವ ಕಷ್ಟ ಕಾಣುತ್ತಿಲ್ಲ. ಪ್ರತಿ ವರುಷ ದೆಹಲಿಯಲ್ಲಿ ಇದೇ ಪರಿಸ್ಥಿತಿ ಇದೆ. ಇದು ರಾಜಕೀಯ ವಿಷಯವಲ್ಲ.

ಜನರ ಆರೋಗ್ಯದ ಪ್ರಶ್ನೆಯಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ಸರ್ಕಾರ ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ನಾವು ಈ ವಿಷಯದಲ್ಲಿ ಸರ್ಕಾರದೊಂದಿಗೆ ಇದ್ದೇವೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ದೆಹಲಿಯಲ್ಲಿ ಗಾಳಿ ವಿಷಕಾರಿಯಾಗಿದೆ. ಜನರು ಮಾಲಿನ್ಯದಿಂದ ಬಳಲುತ್ತಿದ್ದಾರೆ.

ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಇಂಡಿಯಾ ಒಕ್ಕೂಟದ ಟಿ ಆರ್‌ ಬಾಲು ಸೇರಿದಂತೆ ಲೋಕಸಭಾ ಹಾಗು ರಾಜ್ಯಸಭೆಯ ಅನೇಕ ಸದಸ್ಯರು ಪಾಲ್ಗೊಂಡಿದ್ದರು.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button