ಕಸ್ತೂರಿ ರಂಗನ್ ವರದಿ ಜಾರಿಗೆ ಮಾಡಲು ಬಿಡುವದಿಲ್ಲ|ಬಿಜೆಪಿ ದ್ವಿಮುಖ ನೀತಿ ವಿರುದ್ದ ಆಕ್ರೋಶ|ವರದಿ ತಿರಸ್ಕರಿಸಲು ವಿಶೇಷ ಅಧಿವೇಶನ-ಮಧು ಬಂಗಾರಪ್ಪ
ಕೇಂದ್ರ ಸರ್ಕಾರ ಈ ವರದಿ ಜಾರಿಗೆ ಸಂಬಂಧಿಸಿದಂತೆ 2016ರ ಆಗಸ್ಟ್ 11ರಂದು ಕರೆದಿದ್ದ ಮಹತ್ವದ ಸಭೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರಿನ ಸಂಸದರು ಏಕೆ ಭಾಗವಹಿಸಿರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡುವದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ಕಾಗಿ ಹೇಳಿದ್ದಾರೆ.
ಮಲೆನಾಡು ಜನರನ್ನು ಕಾಡುತ್ತಿರುವ ಕಸ್ತೂರಿ ರಂಗನ್ ವರದಿಯ ಜಾರಿಗೆ ವಿಷಯವನ್ನು ಮುಂದಿಟ್ಟುಕೊಂಡು, ಮಲೆನಾಡಿನ ಜನರ, ರೈತರ ಪರ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರ ದ್ವಿಮುಖ ನೀತಿಯನ್ನು ಸಚಿವ ಮಧು ಬಂಗಾರಪ್ಪ ಖಂಡಿಸಿದರು.

ಸೋಮವಾರದಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠೀಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕರು ತಾವು ಈ ವರದಿಯ ವಿರುದ್ದಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದ್ದೇವೆ ಎಂದು ಹೇಳುತ್ತಿದ್ದಾರೆ.
ಆದರೆ ಕೇಂದ್ರದಲ್ಲಿರುವ ಅವರ ಪಕ್ಷದ್ದೇ ಸರ್ಕಾರ ಒಂದರ ಹಿಂದೊಂದರಂತೆ ವರದಿ ಜಾರಿಗೆ ಸಂಬಂಧಿಸಿದ ಕರಡು ಅಧಿಸೂಚನೆ ಹೊರಡಿಸುತ್ತಿದೆ ಇದನ್ನು ಪ್ರಶ್ನಿಸುವ ಧೈರ್ಯ ಬಿಜೆಪಿ ನಾಯಕರಿಗೆ ಏಕಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.
ಈ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎನ್ಜಿಟಿಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದರ ಬಗ್ಗೆ ಇವರೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಈ ವರದಿ ಜಾರಿಗೆ ಸಂಬಂಧಿಸಿದಂತೆ 2016ರ ಆಗಸ್ಟ್ 11ರಂದು ಕರೆದಿದ್ದ ಮಹತ್ವದ ಸಭೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರಿನ ಸಂಸದರು ಏಕೆ ಭಾಗವಹಿಸಿರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇನ್ನು ಈ ವರದಿಯನ್ನು ತಿರಸ್ಕರಿಸುವ ಸಂಬಂಧ ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿರುವ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಮಲೆನಾಡಿನ ಜನರ ಪರವಾಗಿ ನಾವಿದ್ದೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಮಾಜಿ ಸಂಸದ ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್, ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ







