DistrictShivamogga

ಶಿವಮೊಗ್ಗ ಜಿಲ್ಲಾದ್ಯಂತ ಸಾಲು ಸಾಲು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ-ಬಿಗಿ ಪೋಲಿಸ್‌ ಬಂದೋಬಸ್ತ

ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪೂರ್ವಭಾವಿ ಕ್ರಮ ಬಂದೋಬಸ್ತ್ ಕುರಿತ ಮಾಹಿತಿ‌ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲಾದ್ಯಂತ ಸಾಲು ಸಾಲು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಪರ್ವ ಇಂದಿನಿಂದ ಆರಂಭಗೊಂಡಿದೆ. ಇಂದು ಸೆ.4ರಂದು ಭದ್ರಾವತಿ ನಗರದಲ್ಲಿ ಹಿಂದೂಮಹಾಸಭಾ ಗಣಪತಿ ಮೆರವಣಿಗೆ ಹಮ್ಮಿಕ್ಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ಭದ್ರತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.

ಶಿವಮೊಗ್ಗ ಜಿಲ್ಲಾದ್ಯಂತ ಸಾವಿರಾರು ಸಿಸಿ ಕ್ಯಾಮರಾಗಳನ್ನ ಅಳವಡಿಸಿ ಲೈವ್ ಸ್ಟ್ರೀಮಿಂಗ್ ಮೂಲಕ ಕಣ್ಣಿಟ್ಟಿದೆ.. ಇನ್ನೂ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪೂರ್ವಭಾವಿ ಕ್ರಮ ಬಂದೋಬಸ್ತ್ ಕುರಿತ ಮಾಹಿತಿ‌ ಪಡೆದಿದ್ದಾರೆ.

ಇನ್ನು ಬಂದೋಬಸ್ತ್‌ ಕುರಿತು ಹಲವು ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಶಾಂತಿ ಕದಡುವ ಶಂಕಿತ 86 ಜನ ಕಿಡಿಗೇಡಿಗಳ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ರೂಟ್ ಮಾರ್ಚ್, ಸಶಸ್ತ್ರ ಮೀಸಲು ಪಡೆ, ಶ್ವಾನದಳ, ಡ್ರೋಣ್ ತಂಡದಿಂದ ಪರಿಶೀಲನೆ ನಡೆಸಲಾಗಿದೆ.

ಇನ್ನು ಗಣೇಶ್‌ ವಿಸರ್ಜನಾ ‌ಮೆರವಣಿಗೆ ಮಾರ್ಗ ತಪಾಸಣೆ, ಸೂಕ್ಷ್ಮ ‌ಪ್ರದೇಶದಲ್ಲಿ ಪೋರ್ಟಬಲ್ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ.

ಇನ್ನು ಸೆಪ್ಟಂಬರ್ 6 ರಂದು ಶಿವಮೊಗ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಪೋಲಿಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button