DharwadDistrictKarnataka

ಎಸ್‌ಐಆರ್ ಕುರಿತು ಬಿಜೆಪಿಯಿಂದ ಅಪಪ್ರಚಾರ| ಮತದಾರರಲ್ಲಿ ಭಯ ಮತ್ತು ಗೊಂದಲ ಮೂಡಿಸಬೇಡಿ|ಕಾಂಗ್ರೆಸ್‌ ನಾಯಕ ಶಾಕೀರ್‌ ಸನದಿ ಮನವಿ

ಇದು ರಾಜಕೀಯ ಮಾಡುವ ಸಮಯವಲ್ಲ, ಪ್ರಜಾಪ್ರಭುತ್ವವನ್ನು ಬಲಪಡಿಸುವ ಸುವರ್ಣಾವಕಾಶವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕ ಶಾಕೀರ್‌ ಸನದಿ, ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಹುಬ್ಬಳ್ಳಿ: ಕರ್ನಾಟಕದಲ್ಲಿ ಎಸ್‌ಐಆರ್ ಕುರಿತು ಬಿಜೆಪಿ ನಡೆಸುತ್ತಿರುವ ಅಪ್ರಚಾರವು ಜನರಲ್ಲಿ ಅನಗತ್ಯ ಗೊಂದಲವನ್ನು ಉಂಟುಮಾಡುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕ ಶಾಕೀರ್‌ ಸನದಿ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದ ಪ್ರಕ್ರಿಯೆಯ ಬಗ್ಗೆ ಜನರಿಗೆ ವಿಶ್ವಾಸ ತುಂಬುವ ಬದಲು ಅನುಮಾನ ಸೃಷ್ಟಿಸುವುದು ಯಾವುದೇ ಜವಾಬ್ದಾರಿಯುತ ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿಸುವ ಬದಲು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.

ವಿಶೇಷ ಮತದಾರರ ತೀವ್ರ ಪರಿಷ್ಕರಣೆ ಕುರಿತು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ, ಬಿಜೆಪಿಗೆ ಇಷ್ಟೊಂದು ಆತಂಕ ಏಕೆ? ಎಂಬ ಪ್ರಶ್ನೆ ಕೇಳುವಂತೆ ಮಾಡಿದೆ ಎಂದು ಶಾಕೀರ ಸನದಿ ಹೇಳಿದ್ದಾರೆ.

ಮತದಾರರ ಪಟ್ಟಿಯನ್ನು ಶುದ್ಧೀಕರಿಸಿ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಮತದಾನದ ಹಕ್ಕು ದೊರೆಯುವಂತೆ ಮಾಡುವ ಈ ಪ್ರಕ್ರಿಯೆಗೆ ಎಲ್ಲ ರಾಜಕೀಯ ಪಕ್ಷಗಳು ಸಹಕರಿಸಬೇಕೇ ಹೊರತು ಜನರಲ್ಲಿ ಗೊಂದಲ ಮತ್ತು ಭಯದ ವಾತಾವರಣ ನಿರ್ಮಿಸಬಾರದು ಎಂದು ಶಾಕೀರ ಸನದಿ, ಬಿಜೆಪಿ ನಾಯಕರಲ್ಲಿ ತಿಳಿಹೇಳಿದ್ದಾರೆ.

ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳ ಸೇವೆಯನ್ನು ಅಭಿನಂದಿಸಿದ್ದಾರೆ.

ಸೀಮಿತ ಅವಧಿ, ಅನೇಕ ತಾಂತ್ರಿಕ ಹಾಗೂ ಸ್ಥಳೀಯ ಸವಾಲುಗಳ ನಡುವೆಯೂ ಅವರು ಮನೆ ಮನೆಗೆ ತೆರಳಿ ಸಾಧ್ಯವಾದಷ್ಟು ಹೆಚ್ಚು ಮತದಾರರನ್ನು ತಲುಪುವ ನಿಷ್ಠಾವಂತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಬಿಎಲ್‌ಓಗಳ ಕಾರ್ಯಕ್ಕೆ ಎಲ್ಲ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಶಾಕೀರ್‌ ಸನದಿ ಕರೆ ನೀಡಿದ್ದಾರೆ.

ಬಿಜೆಪಿ ನಾಯಕರು ಜನರಲ್ಲಿ ಹರಡಿಸುತ್ತಿರುವ ಅನುಮಾನಗಳು ಬಡವರು, ನಿರಕ್ಷರರು, ಹಿರಿಯ ನಾಗರಿಕರು, ದಿವ್ಯಾಂಗರು ಹಾಗೂ ಗ್ರಾಮೀಣ ಪ್ರದೇಶದ ಸಾಮಾನ್ಯ ಮತದಾರರ ಬಗ್ಗೆ ಅವರ ನಿಜವಾದ ನಿಲುವನ್ನು ಪ್ರಶ್ನಿಸುವಂತಿವೆ ಎಂದು ಶಾಕೀರ್‌ ಸನದಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೃಪೆ-ಕನ್ನಡಪ್ರಭ

ಮತದಾನದ ಹಕ್ಕು ಶ್ರೀಮಂತರಿಗೆ, ವಿದ್ಯಾವಂತರಿಗೆ ಅಥವಾ ಪ್ರಭಾವಿಗಳಿಗಷ್ಟೇ ಸೀಮಿತವಾಗಿರಬೇಕೇ? ಎಂದು ಪ್ರಶ್ನಿಸಿರುವ ಅವರು, ಸ್ವಾತಂತ್ರ್ಯಕ್ಕೂ ಮುಂಚಿನ ಆಡಳಿತ ವ್ಯವಸ್ಥೆಯಂತೆ ಸಾಮಾನ್ಯ ಜನರನ್ನು ಮತದಾನದ ಹಕ್ಕಿನಿಂದ ದೂರವಿಡುವ ಮನೋಭಾವವನ್ನು ಭಾರತ ಬಹಳ ಹಿಂದೆಯೇ ತಿರಸ್ಕರಿಸಿದೆ ಎಂದಿದ್ದಾರೆ.

ನಮ್ಮ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಸಮಾನ ಮತದಾನದ ಹಕ್ಕನ್ನು ನೀಡಿದೆ ಎಂದು ಶಾಕೀರ್‌ ಸನದಿ ಪ್ರತಿಪಾದಿಸಿದ್ದಾರೆ.

ಪ್ರತಿ ಎಸ್‌ಐಆರ್ ಪ್ರಕ್ರಿಯೆಯಲ್ಲಿಯೂ ಈಗಾಗಲೇ ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸುವುದು, ಅಗತ್ಯ ತಿದ್ದುಪಡಿಗಳನ್ನು ಮಾಡುವುದು ಹಾಗೂ ಹೊಸದಾಗಿ ಅರ್ಹರಾಗಿರುವ ಮತದಾರರನ್ನು ಸೇರ್ಪಡೆಗೊಳಿಸುವುದು ಸಾಮಾನ್ಯ ಮತ್ತು ಕಾನೂನುಬದ್ಧ ಪ್ರಕ್ರಿಯೆಯಾಗಿದೆ.

ಇದನ್ನು ತಪ್ಪಾಗಿ ಅರ್ಥೈಸಿ ಜನರಲ್ಲಿ ಭಯ ಮತ್ತು ಗೊಂದಲ ಉಂಟುಮಾಡುವುದು ಸೂಕ್ತವಲ್ಲ. ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಆಯೋಗದಂತಹ ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಶಾಕೀರ್‌ ಸನದಿ ಸಲಹೆ ನೀಡಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ಪ್ರಕ್ರಿಯೆಯನ್ನು ವಿರೋಧಿಸುವ ಬದಲು ಬಡವರು, ನಿರಕ್ಷರರು, ಹಿರಿಯ ನಾಗರಿಕರು, ದಿವ್ಯಾಂಗರು ಹಾಗೂ ಸಹಾಯದ ಅಗತ್ಯವಿರುವ ಮತದಾರರಿಗೆ ಮನೆ ಬಾಗಿಲಲ್ಲೇ ನೆರವು ನೀಡಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಸಹಕರಿಸಬೇಕು ಎಂದು ಶಾಕೀರ್‌ ಸನದಿ ಮನವಿ ಮಾಡಿದ್ದಾರೆ.

ಇದು ರಾಜಕೀಯ ಮಾಡುವ ಸಮಯವಲ್ಲ, ಪ್ರಜಾಪ್ರಭುತ್ವವನ್ನು ಬಲಪಡಿಸುವ ಸುವರ್ಣಾವಕಾಶವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕ ಶಾಕೀರ್‌ ಸನದಿ, ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ತಮ್ಮ ಬುದ್ಧಿವಂತಿಕೆ ಮತ್ತು ಅನುಭವವನ್ನು ದೇಶದ ಹಿತಕ್ಕಾಗಿ ಬಳಸಿ, ಚುನಾವಣಾ ಆಯೋಗವನ್ನು ಅನಗತ್ಯವಾಗಿ ಟೀಕಿಸುವುದು ಅಥವಾ ಜನರಲ್ಲಿ, ವಿಶೇಷವಾಗಿ ಬಡವರು ಹಾಗೂ ಅಲ್ಪಸಂಖ್ಯಾತರಲ್ಲಿ, ಭಯ ಮತ್ತು ಗೊಂದಲ ಉಂಟುಮಾಡುವ ಪ್ರಯತ್ನವನ್ನು ಕೈಬಿಡಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್‌ ಸನದಿ, ಬಿಜೆಪಿ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಆರೋಗ್ಯಕರ ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳ ಕರ್ತವ್ಯ ಜನರನ್ನು ಮತದಾನದಿಂದ ದೂರವಿಡುವುದು ಅಲ್ಲ, ಪ್ರತಿಯೊಬ್ಬ ಅರ್ಹ ನಾಗರಿಕನನ್ನೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸುವುದಾಗಿದೆ ಎಂದು ಶಾಕೀರ್‌ ಸನದಿ ಹೇಳಿದ್ದಾರೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button