InternationalNationalNew Delhi

ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆ|ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್|ಸ್ವಾಗತಕ್ಕೆ ಖುದ್ದು ವಿಮಾನ ನಿಲ್ದಾಣಕ್ಕೆ ಬಂದ ಮೋದಿ

ದೆಹಲಿಯ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಿರುವ ವ್ಲಾಡಿಮಿರ್ ಪುಟಿನ್ ನಾಳೆ ಶುಕ್ರವಾರದಂದು ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಿದ್ದಾರೆ.

ದೆಹಲಿಯಲ್ಲಿ ಶುಕ್ರವಾರದಂದು ನಡೆಯಲಿರುವ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿ ವ್ಲಾಡಿಮಿರ್ ಪುಟಿನ್ ಅವರನ್ನು ಬರಮಾಡಿಕೊಂಡರು.

ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಏರ್ಪಡಿಸಿರುವ ಖಾಸಗಿ ಭೋಜನ ಕೂಟದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾಗವಹಿಸಲಿದ್ದಾರೆ.

ದೆಹಲಿಯ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಿರುವ ವ್ಲಾಡಿಮಿರ್ ಪುಟಿನ್ ನಾಳೆ ಶುಕ್ರವಾರದಂದು ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಿದ್ದಾರೆ.

ಬಳಿಕ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನಡೆಯಲಿದೆ. ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ಹೈದರಾಬಾದ್ ಹೌಸ್‌ನಲ್ಲಿ ನಡೆಯಲಿದೆ.

ಬಳಿಕ ಅವರು ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಐಟಿಸಿ ಮೌರ್ಯ ಹೊಟೇಲ್‌ ಸೇರಿದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸುವ ಎಲ್ಲಡೆ ಭಾರಿ ಬಿಗಿ ಭದ್ರತೆ ವ್ಯವಸ್ಥೆಗಳನ್ನು ಮಾಡಲಾಗಿದೆ.

Follow Us

Leave a Reply

Your email address will not be published. Required fields are marked *

Back to top button