ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ|ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮ-ನೂತನ ಡಿಸಿ, ಎಸ್.ಪಿ ಭರವಸೆ|ಗಾಂಜಾ,ಇಸ್ಪೀಟ್ ಹಾವಳಿ ತಡೆಗಟ್ಟಲು ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಸಲಹೆ
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬುಧವಾರದಂದು ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ , ಜಿಲ್ಲೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಂಡು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರಿ ಜಾಗ ಒತ್ತುವರಿ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ , ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದವರಿಗೆ ನ್ಯಾಯಯುತ ಪರಿಹಾರ, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಕಲ್ಪಿಸುವುದು. ಇದು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕೈಗೊಳ್ಳಲಿರುವ ಕೆಲಸಗಳ ಒಂದು ಪಟ್ಟಿ.
ಇನ್ನು ಹತ್ತು ಹಲವಾರು ಅಭಿವೃದ್ದಿ ಕಾರ್ಯಗಳ ಕ್ರಿಯಾ ಯೋಜನೆಯನ್ನು ಕೈಗೆತ್ತಿಕೊಳ್ಳಲಿರುವ ಅವರು, ಕೆಲವು ವಿಚಾರಗಳನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಿಸಿದ್ದಾರೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬುಧವಾರದಂದು ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ , ಜಿಲ್ಲೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಂಡು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಸಮಸ್ಯೆಯ ಮೂಲ ಹುಡುಕಿ ಪರಿಹಾರ ಕಂಡುಹಿಡಿಯುವ ಕೆಲಸ ಮಾಡುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯವಾಗಿದ್ದು ಆಗ ಮಾತ್ರ ರಚನಾತ್ಮಕ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿನ ಪ್ರವಾಸೀ ತಾಣಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಇದೇ ವೇಳೆ ನೂತನ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಮಾತನಾಡಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬದ್ದರಾಗಿದ್ದು, ಜಿಲ್ಲೆಯನ್ನು ಸಂಪೂರ್ಣವಾಗಿ ಮಾದಕ ವ್ಯಸನ ಮುಕ್ತ ಮಾಡುವುದು ಇಲಾಖೆಯ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು. ಇನ್ನು ಸುಳ್ಳು ಸುದ್ದಿಗಳ ಹರಡುವಿಕೆಯನ್ನು ತಡೆಯಲು ಬೀಟ್ ಸಿಬ್ಬಂದಿ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿರಿಯ ಪತ್ರಕರ್ತ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಮಾತನಾಡಿ, ಡಿಸಿ ಮತ್ತು ಎಸ್.ಪಿ ಅವರು ಜಿಲ್ಲಾಡಳಿತದ ಎರಡು ಚಕ್ರಗಳಿದ್ದಂತೇ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹಬ್ಬಿರುವ ಗಾಂಜಾ ಹಾಗೂ ಇಸ್ಪೀಟ್ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಶಿವಮೊಗ್ಗ ಪ್ರೆಸ್ ಟ್ರಸ್ಟ್ನ ಪತ್ರಿಕಾ ಭವನಕ್ಕೆ ಆಗಮಿಸಿದ ನೂತನ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಎಸ್.ಪಿ ಬಿ.ನಿಖಿಲ್ ಅವರನ್ನು ಹಿರಿಯ ಪತ್ರಕರ್ತ ಹಾಗೂ ಅಧ್ಯಕ್ಷ ಎನ್. ಮಂಜುನಾಥ್ ಹಾಗೂ ಇತರೆ ಟ್ರಸ್ಟಿಗಳು ಬರಮಾಡಿಕೊಂಡರು. ಬಳಿಕ ಹೂಗುಚ್ಚ ನೀಡಿ ಸನ್ಮಾನಿಸಿದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ನ ಕಾರ್ಯದರ್ಶಿ ನಾಗರಾಜ ನೇರಿಗೆ, ಸಹಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹೊನ್ನಾಳಿ ಚಂದ್ರಶೇಖರ್, ಸಂಪಾದಕರ ಸಂಘದ ಅಧ್ಯಕ್ಷ ಎಸ್.ಕೆ.ಗಜೇಂದ್ರಸ್ವಾಮಿ, ಚಂದ್ರಶೇಖರ್ ಶೃಂಗೇರಿ, ವಿ.ಸಿ.ಪ್ರಸನ್ನ, ಆರಗ ರವಿ, ರಾಮಚಂದ್ರ ಗುಣಾರಿ, ಸ್ಪಂದನ ಚಂದ್ರು ಸೇರಿದಂತೆ ಹಲವಾರು ಪತ್ರಕರ್ತರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.







