Shivamogga
ಶಿವಮೊಗ್ಗ ಹರಿಗೆ ಬಳಿ ಬೆಳ್ಳಂಬೆಳಗ್ಗೆ ಅಪಘಾತ|ಮರಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಹೋಳು|ಸ್ಥಳದಲ್ಲೇ ಸಿಗೇಹಟ್ಟಿ ನಿವಾಸಿ ಗುರುರಾಜ್ ಸಾವು|
ಬೆಳಗಿನ ಜಾವ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ವೇಳೆ ಬೆಳಗಿನ ಜಾವ ಸುಮಾರು 2 ಗಂಟೆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಚಲಾಯಿಸುತ್ತಿದ್ದ ಹೊಂಡಾಸಿಟಿ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಹೊರವಲಯದ ಹರಿಗೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಅಪಘಾತದಲ್ಲಿ ಕಾರು ಮೂರು ಹೋಳಾಗಿರುವುದು ಭೀಕರತೆಗೆ ಸಾಕ್ಷಿಯಾಗಿತ್ತು.

ಸಾವನ್ನಪ್ಪಿದ ಯುವಕನನ್ನು ಸಿಗೇಹಟ್ಟಿ ನಿವಾಸಿ ಗುರುರಾಜ್(22) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ವೇಳೆ ಬೆಳಗಿನ ಜಾವ ಸುಮಾರು 2 ಗಂಟೆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮೃತ ಗುರುರಾಜ್ ಆಟೋ ಚಾಲಕನಾಗಿದ್ದು, ಕಾರು ಭಂಡಾರಿ ಗ್ಯಾಸ್ ಏಜೆನ್ಸಿಗೆ ಸೇರಿದ್ದು ಎಂಬ ಮಾಹಿತಿ ದೊರಕಿದೆ. ಪೂರ್ವಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ






