ಮಲೆನಾಡಿನಲ್ಲಿ ಅಡಿಕೆ ಬೆಳೆ ಬಹುತೇಕ ನಾಶ|ವಿಶೇಷ ಪರಿಹಾರದ ಪ್ಯಾಕೇಜ್ ನೀಡಬೇಕು|ಲೋಕಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಒತ್ತಾಯ
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಗಂಭೀರ ನ್ಯೂನತೆಗಳ ಬಗ್ಗೆ ಗಮನ ಸೆಳೆದ ಸಂಸದ ಬಿ ವೈ ರಾಘವೇಂದ್ರ, 2024-25ರ ಖಾಲಿಫ್ ಬೆಲೆ ನಷ್ಟಕ್ಕೆ ಶಿವಮೊಗ್ಗ ಜಿಲ್ಲೆಯ ರೈತರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದರು.

ಬೆಳೆ ನಾಶದಿಂದ ಬಳಲುತ್ತಿರುವ ಕರ್ನಾಟಕದ ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರವು ತುರ್ತಾಗಿ ಮಧ್ಯಪ್ರವೇಶಿಸುವ ಮೂಲಕ ರೈತರಿಗೆ ವಿಶೇಷ ಪರಿಹಾರದ ಪ್ಯಾಕೇಜ್ ನೀಡಬೇಕೆಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಗುರವಾರದಂದು ಲೋಕಸಭೆಯಲ್ಲಿ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ವಿಶೇಷವಾಗಿ ಮಲೆನಾಡು ಅಡಿಕೆ ಬೆಳೆಗಾರರು, ಹಳದಿ ಎಲೆ ರೋಗ, ಮತ್ತು ಎಲೆ ಚುಕ್ಕೆ ರೋಗವು ಅಡಿಕೆ ಗಿಡಗಳಿಗೆ ಹರಡುವಿಕೆಯಿಂದ ಈ ವರುಷ ಭಾರಿ ಇಳುವರಿ ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಸರ್ಕಾರದ ಗಮನಕ್ಕೆ ತಂದರು.
ಈ ರೋಗಗಳಿಂದ ಇಡೀ ಅಡಿಕೆ ತೋಟವೇ ನಾಶವಾಗುತ್ತವೆ ಎಂದು ಹೇಳಿದರು.
ಅಡಿಕೆ ಬೆಳೆಗಾರರ ಪರ ನಿಂತ ಸಂಸದ ಬಿ ವೈ ರಾಘವೇಂದ್ರ
ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಗ್ರಹ
ಕಳೆದ ಮೇ ತಿಂಗಳಿಂದ ನಿರಂತರ ಮಳೆಯಿಂದಾಗಿ ಈ ರೋಗಗಳು ಉಲ್ಬಣಗೊಂಡು ಮಲೆನಾಡಿನಲ್ಲಿ ಅಡಿಕೆ ಬೆಳೆ ಬಹುತೇಕ ನಾಶವಾಗಿದೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ತಿಳಿಸಿದರು.
ಇದರಿಂದ ಅಡಿಕೆ ಉತ್ಪಾದನೆ ತೀವ್ರವಾಗಿ ಕುಸಿದಿದೆ. ತಮ್ಮ ಲೋಕಸಭಾ ವ್ಯಾಪ್ತಿಯಲ್ಲಿನ ರೈತರ ಆರ್ಥಿಕ ಪರಿಸ್ಥಿತಿ ಮೇಲೆ ವೃತಿರಿಕ್ತ ಪರಿಣಾಮ ಎದುರಿಸುವಂತಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು, ಹಾನಿಗೀಡಾಗಿರುವ ಅಡಿಕೆ ಬೆಳೆಗಾರರಿಗೆ ವಿಶೇಷ ಪರಿಹಾರದ ಪ್ಯಾಕೇಜ್ ಅನ್ನು ನೀಡುವ ಬಗ್ಗೆ ಗಮನಹರಿಸಬೇಕು.
ಮತ್ತು ಈ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಮೂಲಕ ಮನದಟ್ಟು ಮಾಡಿದರು.
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ
ಖಾಲಿಫ್ ಬೆಲೆ ನಷ್ಟಕ್ಕೆ ರೈತರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ
ನ್ಯೂನತೆಗಳ ಬಗ್ಗೆ ಗಮನ ಸೆಳೆದ ಸಂಸದ ಬಿ ವೈ ರಾಘವೇಂದ್ರ
ಇದೇ ವೇಳೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಗಂಭೀರ ನ್ಯೂನತೆಗಳ ಬಗ್ಗೆ ಗಮನ ಸೆಳೆದ ಸಂಸದ ಬಿ ವೈ ರಾಘವೇಂದ್ರ, 2024-25ರ ಖಾಲಿಫ್ ಬೆಲೆ ನಷ್ಟಕ್ಕೆ ಶಿವಮೊಗ್ಗ ಜಿಲ್ಲೆಯ ರೈತರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ 100+ ಮಳೆ ಮಾಪಕಗಳಲ್ಲಿ ಸುಮಾರು ಶೇ50 ರಷ್ಟು ಕಾರ್ಯನಿರ್ವಹಿಸುತ್ತಿಲ್ಲ. ರಾಜ್ಯ ಸರ್ಕಾರ ಘೋಷಿಸಿದ ಬ್ಯಾಕಪ್ ಹವಾಮಾನ ಕೇಂದ್ರಗಳನ್ನು ತಡವಾಗಿ ಗುರುತು ಮಾಡಲಾಗಿದೆ.
ಸಂಪೂರ್ಣ, ವಿಭಿನ್ನ ಮಳೆ ಮಾದರಿ ಹೊಂದಿರುವ ಪ್ರದೇಶಗಳಲ್ಲಿ 20-45 ಕಿ.ಮಿ ದೂರದಲ್ಲಿ ಗುರುತು ಮಾಡಲಾಗಿದೆ.
ಇದರಿಂದ ವಿಮೆಯ ಲೆಕ್ಕಾಚಾರದಲ್ಲಿ ತಾಂತ್ರಿಕ ದೋಷಗಳು ಉಂಟಾಗಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಸದನದಲ್ಲಿ ಸವಿಸ್ತಾರವಾಗಿ ಹೇಳಿದರು.
ಹವಾಮಾನ ಕೇಂದ್ರಗಳ ದತ್ತಾಂಶವನ್ನು ಆಧರಿಸಿ,
ಪರಿಹಾರ ಮರು ಲೆಕ್ಕಾಚಾರ ಮಾಡಲು ರಾಜ್ಯ ಸರ್ಕಾರಕ್ಕೆ
ನಿರ್ದೇಶಿಸಲು ಸಂಸದ ಬಿ ವೈ ರಾಘವೇಂದ್ರ ಆಗ್ರಹ
ಹತ್ತಿರದ ಮತ್ತು ಹವಾಮಾನಕ್ಕೆ ಅನುಗುಣವಾಗಿ ನಿಖರವಾದ ಹವಾಮಾನ ಕೇಂದ್ರಗಳ ದತ್ತಾಂಶವನ್ನು ಆಧರಿಸಿ, wbcis ಪರಿಹಾರವನ್ನು ಮರು ಲೆಕ್ಕಾಚಾರ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಂಸದ ಬಿ ವೈ ರಾಘವೇಂದ್ರ ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವಾಲಯವು, ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಆಗ್ರಹಿಸಿದರು.
ದೈನಂದಿನ sms ಮಳೆ ಮುನ್ನೆಚ್ಚರಿಕೆ ಸೇವೆಯನ್ನು ಕೂಡ ಮರುಸ್ಥಾಪಿಸಬೇಕೆಂದು ವಿನಂತಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದ ಅತ್ಯುತ್ತಮ ರೈತ ಕೇಂದ್ರಿಯ ಯೋಜನೆಯನ್ನು ಸಮರ್ಪಕವಾಗಿ ರೈತರಿಗೆ ನ್ಯಾಯಯುತ ಹಾಗು ಅರ್ಹ ರಕ್ಷಣೆ ಮತ್ತು ನೆರವು ದೊರೆಯುವಂತೆ ಕ್ರಮ ವಹಿಸಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಸುದೀರ್ಘವಾಗಿ ಹೇಳುವ ಮೂಲಕ ಸರ್ಕಾರದ ಗಮನ ಸೆಳೆದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







