ಬೆಳೆ ಸಾಲದ ಚಿಂತೆಗೆ ಬಲಿಯಾದ ರೈತ|ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡ ಹನುಮಂತಪ್ಪ|ಶಿವಮೊಗ್ಗದ ಹರಮಘಟ್ಟ ಗ್ರಾಮದಲ್ಲಿ ನಡೆದ ಘಟನೆ
ಹೊಲಕ್ಕೆ ಹೋಗುತ್ತೇನೆ ಎಂದು ಹೊರಟ ರೈತ ಹನುಮಂತಪ್ಪ ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಗ್ರಾಮದ ಪುಟ್ಟ ಮಾರಮ್ಮ ದೇವಸ್ಥಾನಕ್ಕೆ ತೆರಳುವ ದಾರಿಯಲ್ಲಿ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗ: ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದ ರೈತನೋರ್ವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.
ಬೆಳೆ ಸಾಲವಾಗಿ ಸೊಸೈಟಿ, ಬ್ಯಾಂಕ್ ಇತರೆಡೆ ಮೃತ ರೈತ ಹನುಮಂತಪ್ಪ ಸಾಕಷ್ಟು ಹಣ ಪಡೆದಿದ್ದರು ಎಂದು ಹೇಳಲಾಗಿದೆ.
ಸೋಮವಾರ ಬೆಳಗ್ಗೆ 6.30 ರ ಸುಮಾರಿಗೆ ಸಾಲ ಮಾಡಿದ್ದರ ಬಗ್ಗೆ ಹಾಗೂ ಅದನ್ನು ತೀರಿಸಲು ಆಗುತ್ತಿಲ್ಲ ಎಂದು ತಮ್ಮ ಹೆಂಡತಿ ಜ್ಯೋತಿ ಅವರ ಮುಂದೆ ಅಲವತ್ತುಕೊಂಡಿದ್ದಾರೆ.
ಬಳಿಕ ಹೊಲಕ್ಕೆ ಹೋಗುತ್ತೇನೆ ಎಂದು ಹೊರಟ ರೈತ ಹನುಮಂತಪ್ಪ ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಗ್ರಾಮದ ಪುಟ್ಟ ಮಾರಮ್ಮ ದೇವಸ್ಥಾನಕ್ಕೆ ತೆರಳುವ ದಾರಿಯಲ್ಲಿ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ರೈತ ಹನುಮಂತಪ್ಪನಿಗೆ 11ವರುಷದ ಮಂಜುಳಾ, 10ವರುಷದ ಚೈತ್ರ ಹಾಗೂ ಐದು ತಿಂಗಳ ಮಗು ಪರಿಣತ ಎಂಬ ಪುಟ್ಟ ಮಕ್ಕಳಿದ್ದಾರೆ. ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







