ಶಿವಮೊಗ್ಗ:ಶೋಷಿತರ ಪರ ಧ್ವನಿಯಾಗಿದ್ದರು ಡಾ.ಅಂಬೇಡ್ಕರ್|ಬಾಬಾಸಾಹೇಬರ ಚಿಂತನೆಗಳೇ ಆದರ್ಶಪ್ರಾಯ-ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್
ಡಾ. ಅಂಬೇಡ್ಕರ್ ಅವರ ಜನ್ಮದಿನದಂದೇ ಸಜ್ಜನ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ಪ್ರತಿಷ್ಠಿತ ಲಂಕೇಶ್ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಎನ್. ಮಂಜುನಾಥ್ ತಿಳಿಸಿದರು.

ಶಿವಮೊಗ್ಗ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಧ್ವನಿ ಇಲ್ಲದವರಿಗೆ ಧ್ವನಿಯಾಗಲೆಂದೇ ಪತ್ರಿಕೆಗಳನ್ನು ಆರಂಭಿಸಿದ್ದರು ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಎನ್. ಮಂಜುನಾಥ್ ಹೇಳಿದರು.
ಅಂಬೇಡ್ಕರ್ ಚಿಂತನೆಗಳು ಪ್ರಸ್ತುತ ದಿನಮಾನದಲ್ಲಿ ಹೆಚ್ಚು ಆಕರ್ಷಿಸುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಅಂಬೇಡ್ಕರ್ ಪೋಟೋ ಇದ್ದರೆ ಆಶ್ಚರ್ಯಪಡಬೇಕಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಪ್ರತಿಷ್ಠಿತ ಪಿ. ಲಂಕೇಶ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಡಿ ಮಹದೇವಪ್ಪ ಅವರಿಗೆ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಡಾ. ಅಂಬೇಡ್ಕರ್ ಅವರ ಜನ್ಮದಿನದಂದೇ ಸಜ್ಜನ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ಪ್ರತಿಷ್ಠಿತ ಲಂಕೇಶ್ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ರಾಜ್ಯದಲ್ಲೇ ಮಾದರಿಯಾಗಿದ್ದು ಹಲವು ಕಾರ್ಯಕ್ರಮಗಳನ್ನ ನಡೆಸುತ್ತಿದೆ.

ಇಂದಿನ ಕಾಲದಲ್ಲಿ ಲಾಬಿ ಮಾಡಿ ಪ್ರಶಸ್ತಿ ಪಡೆಯುವವರ ನಡುವೆ, ಪ್ರೆಸ್ ಟ್ರಸ್ಟ್ ಮಾತ್ರ ಅರ್ಹತೆ ಮತ್ತು ಹಿರಿತನದ ಆಧಾರದ ಮೇಲೆ ಸಾಧಕರನ್ನು ಆಯ್ಕೆ ಮಾಡುತ್ತಿದೆ ಎಂದು ಹೇಳಿದರು.
ಪ್ರತಿಷ್ಠಿತ ಪಿ. ಲಂಕೇಶ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಹಿರಿಯ ಪತ್ರಕರ್ತ ಡಿ ಮಹದೇವಪ್ಪ, ಪತ್ರಕರ್ತರಿಗೆ ಸಂಶೋಧನೆಯೇ ಜೀವಾಳವಾಗಿದೆ.
ವರದಿಗೆ ತೆರಳುವ ಮುನ್ನ ಪೂರ್ವತಯಾರಿ, ಅಧ್ಯಯನಶೀಲತೆಯಿದ್ದರೆ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವರದಿಗಾರರು ತಮ್ಮ ಅನುಭವ ಮತ್ತು ಆಧಾರಗಳ ಮೇಲೆ ವರದಿ ಸಿದ್ಧಪಡಿಸಬೇಕು. ಪಿ.ಲಂಕೇಶ್ ಅವರ ಬದುಕು, ಬರಹ ಕುರಿತ ಹಲವು ವಿಚಾರಗಳನ್ನ ಈ ಸಂದರ್ಭದಲ್ಲಿ ಅವರು ಸ್ಮರಿಸಿದರು.
ಪಿ. ಲಂಕೇಶ್ ಅವರ ಟೀಕೆ ಟಿಪ್ಪಣಿ ಬರಹಗಳು ಸಮಾಜದ ನೈಜತೆಯ ಪ್ರತಿಬಿಂಬವಾಗಿತ್ತು. ಪತ್ರಕರ್ತರಿಗೆ ಪಿ.ಲಂಕೇಶ್ ಸದಾ ಆದರ್ಶಪ್ರಾಯ ಎಂದು ಹೇಳಿದರು.

ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ್ಸಿಂಗ್ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯು ತನಿಖಾ ಪತ್ರಿಕೋದ್ಯಮಕ್ಕೆ ‘ಬ್ರಹ್ಮಾಸ್ತ್ರ’ವಿದ್ದಂತೆ.
ಪತ್ರಕರ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ತಂತ್ರಜ್ಞಾನಕ್ಕೆ ತಕ್ಕಂತೆ ಅಪ್ಡೇಟ್ ಆಗುವುದು ಅನಿವಾರ್ಯ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮುದ್ರಣ ಮಾಧ್ಯಮಕ್ಕೆ ಹಲವು ಸವಾಲು ,ಆತಂಕ ಎದುರಾಗಿದೆ. ಆದರೆ ಸುದ್ದಿಯ ನೈಜತೆಗಾಗಿ ಪತ್ರಿಕೆಗಳಲ್ಲಿ ವಿಶ್ವಾಸವಿರಿಸಿಕೊಂಡಿದ್ದಾರೆ ಎಂದರು.
ಯಾವಾಗ ಪತ್ರಿಕಾರಂಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತದೆಯೋ, ಆಗ ಪ್ರಜಾಪ್ರಭುತ್ವವೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಹಿರಿಯ ಚಿಂತಕ ಪ್ರೊ. ರಾಜೇಂದ್ರ ಚೆನ್ನಿ , ಪ್ರಜಾಪ್ರಭುತ್ವ ಕೇವಲ ಸಂವಿಧಾನದ ಪುಸ್ತಕದಲ್ಲಿ ಅಥವಾ ಚುನಾವಣೆಯಲ್ಲಿ ಇದ್ದರೆ ಸಾಲದು, ಅದು ಜನರ ಮನಸ್ಥಿತಿಯಲ್ಲಿ ಅಸ್ತಿತ್ವಕ್ಕೆ ಬರಬೇಕು. ಈ ಮನಸ್ಥಿತಿ ರೂಪಿಸಲು ಪತ್ರಿಕೋದ್ಯಮದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ವೈದ್ಯನಾಥ್, ಪ್ರೆಸ್ ಟ್ರಸ್ಟ್ನ ಉಪಾಧ್ಯಕ್ಷ ಹೊನ್ನಾಳಿ ಚಂದ್ರಶೇಖರ್, ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ,ನಾಗರಾಜ್ ನೇರಿಗೆ, ಸಂತೋಷ್ ಕಾಚಿನಕಟ್ಟೆ, ಹಿರಿಯ ಪತ್ರಕರ್ತ ಜೇಸುದಾಸ್ ಮತ್ತಿತರರು ಉಪಸ್ಥಿತರಿದ್ದರು.
ತ್ತಿತರರು ಉಪಸ್ಥಿತರಿದ್ದರು
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯ ಕನ್ನಡ
ಶಿವಮೊಗ್ಗ.







