“ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ”-ಶಿವಮೊಗ್ಗದಲ್ಲಿ 4 ದಿನಗಳ ಕೃಷಿ ಮೇಳ ಆಯೋಜನೆ -ಉಪ ಕುಲಪತಿ ಡಾ.ಆರ್.ಸಿ.ಜಗದೀಶ್
ಮೇಳದಲ್ಲಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿಗಳು ಮತ್ತು ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ ಮತ್ತು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇದೇ ನವೆಂಬರ್07 ರಿಂದ 10ರವರೆಗೆ ಶಿವಮೊಗ್ಗದ ನವುಲೆಯ ಕೃಷಿ ವಿವಿ ಆವರಣದಲ್ಲಿ “ಕೃಷಿ ಮತ್ತು ತೋಟಗಾರಿಕೆ ಮೇಳ”ವನ್ನು ಆಯೋಜಿಸಲಾಗಿದೆ ಎಂದು ಉಪ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದ್ದಾರೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ಈ ಮೇಳ ನಡೆಯಲಿದೆ ಎಂದು ಅವರು ವಿವರಿಸಿದರು.

ಮಂಗಳವಾರದಂದು ಇಲ್ಲಿಯ ಕೃಷಿ ವಿವಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೇಳದಲ್ಲಿ, ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು, ವಿಜ್ಞಾನಿಗಳ-ರೈತರೊಂದಿಗೆ ಸಂವಾದ ಕಾರ್ಯಕ್ರಮಗಳು ಮತ್ತು ವಿಚಾರ ಗೋಷ್ಠಿಗಳನ್ನೂ ಸಹ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಸಸಿಗಳು ಮತ್ತು ತಳಿಗಳ ಪ್ರದರ್ಶನ
ರೈತ – ವಿಜ್ಞಾನಿ ಸಂವಾದ ಮತ್ತು ವಿಚಾರ ಗೋಷ್ಠಿ

ಮೇಳದಲ್ಲಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿಗಳು ಮತ್ತು ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ ಮತ್ತು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಉಪ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.
ಇನ್ನು ರೈತ – ವಿಜ್ಞಾನಿ ಸಂವಾದ ಮತ್ತು ವಿಚಾರ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ ಅವರು,
ಇದೇ ವೇಳೆ ಶ್ರೇಷ್ಠ ಕೃಷಿಕರು ಮತ್ತು ಕೃಷಿಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಮೇಳದಲ್ಲಿ ತಂತ್ರಜ್ಞಾನ ಉದ್ಯಾನವನವು ಆಕರ್ಷಣೆಯಾಗಿದ್ದು, ಇಲ್ಲಿ ವಿವಿಧ ಬೆಳೆಗಳ ನವೀನ ತಂತ್ರಜ್ಞಾನಗಳನ್ನು ರೈತರಿಗೆ ಪರಿಚಯಿಸಲು ಉದ್ದೇಶಿಸಿದೆ ಎಂದು ತಿಳಿಸಿದರು.
ಗಣನೀಯ ಸಾಧನೆಗೈದ ಜಿಲ್ಲಾ ಮಟ್ಟದ
ಪ್ರಗತಿಪರ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರಿಗೆ ಗೌರವ
ಈ ವರ್ಷವೂ ಸಹ ಕೃಷಿ-ತೋಟಗಾರಿಕೆ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಗಣನೀಯ ಸಾಧನೆಗೈದ ಜಿಲ್ಲಾ ಮಟ್ಟದ ಪ್ರಗತಿಪರ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ.
ವಿವಿಧ ವಿಸ್ತರಣೆ ಚಟುವಟಿಕೆಗಳ ಮೂಲಕ 4 ಲಕ್ಷ ರೈತರಿಗೆ ಈವರೆಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ 7 ಜಿಲ್ಲೆಗಳಲ್ಲಿ ತಾಂತ್ರಿಕ ಮಾಹಿತಿಯನ್ನು ಒದಗಿಸಲಾಗುತ್ತಿದೆ ಎಂದು ಉಪ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.
4 ದಿನಗಳ ಬೃಹತ್ ಕೃಷಿ ಮೇಳಕ್ಕೆ
ಕೃಷಿ ಸಚಿವ ಚೆಲುವರಾಯಸ್ವಾಮಿ ಚಾಲನೆ

ಕೃಷಿ ಮೇಳವನ್ನು ನವೆಂಬರ್ 07ರಂದು ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ತಾಂತ್ರಿಕ ಕೈಪಿಡಿಗಳ ಬಿಡುಗಡೆಗೊಳಿಸಲಿದ್ದಾರೆ ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

ರಾಜ್ಯ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ತಂತ್ರಜ್ಞಾನ ಉದ್ಯಾನವನ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ.ಸಂಗಮೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರುಗಳು ಭಾಗವಹಿಸಲಿದ್ದಾರೆ ಎಂದು ಉಪ ಕುಲಪತಿ ಡಾ.ಆರ್.ಸಿ.ಜಗದೀಶ್ ಈ ಸಂದರ್ಭದಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿವಿಯ ಗ್ರಂಥಪಾಲಕ ಬಿ.ಕೆ.ಶಿವಣ್ಣ, ವಿಸ್ತರಣಾಧಿಕಾರಿ ಡಾ.ಗಿರಿಜೇಶ್, ಡಾ.ದುಶ್ಯಂತಕುಮಾರ್, ಡಾ.ಹೇಮ್ಲಾ ನಾಯ್ಕ್, ಡಾ.ತಿಪ್ಪೇಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಮುಖ್ಯಸ್ಥರು
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ



