DistrictPoliticalShivamoggaSpecial Stories
Shivmogga- ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಘಟಕದ 70ನೇ ವರ್ಷಾಚರಣೆ- “ಕುಟುಂಬ ಸಂಗಮ” ಕಾಯ೯ಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ
ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆದ ಕಾಯ೯ಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಭಾರತೀಯ ಮಜೂರ್ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ರವೀಂದ್ರ ಕ್ಕಿಂಟೆ, ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಿತು.

ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾರತೀಯ ಮಜ್ದೂರ್ ಸಂಘ, ಕರ್ನಾಟಕದ 70ನೇ ವರ್ಷಾಚರಣೆಯ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ನಿಮಿತ್ತ ಏರ್ಪಡಿಸಿದ್ದ “ಕುಟುಂಬ ಸಂಗಮ” ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆದ ಕಾಯ೯ಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಭಾರತೀಯ ಮಜ್ದೂರ್ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ರವೀಂದ್ರ ಕ್ಕಿಂಟೆ, ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಿತು.


ಸಮಾರಂಭದಲ್ಲಿ ಭಾರತೀಯ ಮಜ್ದೂರ್ ಸಂಘ ರಾಜ್ಯ ಅಧ್ಯಕ್ಷ ಎನ್.ಕೆ ಪ್ರಕಾಶ್ , ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಪ್ರಾಂತಃ ಸಹ ಕಾರ್ಯವಾಹ ಪಟ್ಟಾಭಿರಾಮ್, ದುರೈರಾಜ್, ಹೆಚ್.ಎಲ್ ವಿಶ್ವನಾಥ, ರಾಜ್ಯ ಪ್ರಧಾನ ಕಾರ್ಯದರ್ಶಿ, ಭಾರತೀಯ ಮದ್ದೂರ್ ಸಂಘ ಹಾಗೂ ಶಾಸಕ ಚನ್ನಬಸಪ್ಪ ಅವರು ಉಪಸ್ಥಿತರಿದ್ದರು


