
ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಈಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮಧ್ಯಪ್ರವೇಶಿಸಿದ್ದಾರೆ.
ಗ್ರೇಡ್ ನಿಗದಿ ಮಾಡುವ ಕುರಿತು ರಾಜ್ಯ ಸರ್ಕಾರವು ಮರುಪರಿಶೀಲಿಸಬೇಕೆಂದು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪರವಾಗಿ ಅವರ ವಿಶೇಷ ಕಾರ್ಯದರ್ಶಿ ಪ್ರಭಾಶಂಕರ್ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ.
ವಿವರಣೆ ನೀಡುತ್ತೇವೆ-ಮಧು ಬಂಗಾರಪ್ಪ|
ತೃತೀಯ ಭಾಷೆಗಳ ಮೇಲೆ ಗ್ರೇಡಿಂಗ್ ಪದ್ದತಿ ಜಾರಿಗೊಳಿಸುವ ಬಗ್ಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ವಿವರಣೆ ನೀಡುವದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಆಯಾಮಗಳಿಂದ ಹಾಗೂ ಸಾಧಕ ಬಾಧಕಗಳನ್ನು ಚರ್ಚೆಯ ನಂತರವೇ ರಾಜ್ಯ ಸರ್ಕಾರವು ಅಂತಿಮವಾಗಿ ಅಂಕಗಳ ಬದಲಿಗೆ ಗ್ರೇಡಿಂಗ್ ನೀಡುವದರ ಬಗ್ಗೆ ತೀರ್ಮಾನ ಕೈಗೊಂಡಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ವರದಿ: ವಿಜಯೀಂದ್ರ ಪಿ.ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು.







