BagalkotBelagaviBengaluru UrbanDistrictKarnatakaPoliticalSpecial Storiesವಿಜಯಪುರ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ-5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ-ಸಿದ್ದರಾಮಯ್ಯ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ.

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಲಾಗಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ, ಡಿ ಕೆ ಶಿವಕುಮಾರ್‌, ಸಚಿವ ಎಚ್‌ ಕೆ ಪಾಟೀಲ್‌ ಸೇರಿದಂತೆ ಇತರರು ಭಾಗಿ

ಬುಧವಾರದಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಂತೆ ನಡೆದ ಸುದೀಘ೯ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಇನ್ನು ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566 ಎಕರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ ಎಂದರು.

59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ. ಮುಳುಗಡೆ ಹೊಂದಲಿರುವ ಜಮೀನನ್ನು 2 ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು.

ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ ರೂ. 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ ರೂ. 87,818 ಕೋಟಿ ಅಂದಾಜಿಸಲಾಗಿದೆ.

ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ರೂ. 17,627 ಕೋಟಿ ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ ರೂ. 40,557.09 ಕೋಟಿ ರೂಪಾಯಿ ಅಂದಾಜಿಸಲಾಗಿದೆ ಎಂದರು.

ಯೋಜನೆಗೆ ಸಂಬಂಧಿಸಿದಂತೆ 9 ಉಪ ಯೋಜನಾ ಸಿವಿಲ್ ಕಾಮಗಾರಿಗಳಿಗೆ ಪರಿಷ್ಕೃತ ಅಂದಾಜು ಮೊತ್ತ 25,122.53 ಕೋಟಿ ರೂಪಾಯಿ ಅಂದಾಜಿಸಲಾಗಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರ್ಕಾರದ ವಾಗ್ದಾನವಾಗಿದೆ ಎಂದು ಹೇಳಿದ ಸಿಎಂ, ಇದಕ್ಕಾಗಿ ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನಮ್ಮ ಪಾಲಿನ ನೀರಿನ ಸದ್ಬಳಕೆ ಮಾಡಿಕೊಳ್ಳಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button