Bengaluru UrbanCinemaDistrictKarnatakaPoliticalSpecial Stories

ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಇನ್ನು “ಕನಾ೯ಟಕ ರತ್ನ” ಬಿ.ಸರೋಜದೇವಿಗೂ ಮರಣೋತ್ತರ ಪ್ರಶಸ್ತಿ-ಸಿಎಂ ಘೋಷಣೆ-

ಗುರುವಾರದಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀಮಾ೯ನ ಕೈಗೊಳ್ಳಲಾಗಿದೆ.

ಡಾ.ರಾಜ್‌ಕುಮಾರ್‌ ಅವರ ನಂತರ ಕನ್ನಡ ಚಲನಚಿತ್ರ ರಂಗದಲ್ಲಿ ಅತ್ಯಂತ ಪ್ರಸಿದ್ದ ಹಾಗೂ ಜನಪ್ರಿಯ ನಟ, ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ “ಕನಾ೯ಟಕ ರತ್ನ” ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀಮಾ೯ನ ಕೈಗೊಳ್ಳಲಾಗಿದೆ.

ಅದೇ ರೀತಿ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಅವರಿಗೂ ಸಹ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಸಂಪುಟ ಸಭೆಯಲ್ಲಿ ತೀಮಾ೯ನಿಸಲಾಗಿದೆ.

2005 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸಾಹಸ ಸಿಂಹ ವಿಷ್ಣುವರ್ಧನ್ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಕನ್ನಡ ಮಾತ್ರವಲ್ಲದೇ ತೆಲುಗು ತಮಿಳು, ತಮಿಳು ಮಲೆಯಾಳಂ ಹಿಂದಿ ಭಾಷೆಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದರು.

ಹಿರಿಯ ನಟಿ ಸರೋಜಾದೇವಿ ಒಂದುಕಾಲದಲ್ಲಿ ಕನ್ನಡ ಚಿತ್ರರಂಗದ ಬೆಳ್ಳಿತೆರೆಯನ್ನು ಆವರಿಸಿಕೊಂಡು ಅಭಿನಯ ಸರಸ್ವತಿಯೆಂದು ಗುರುತಿಸಿಕೊಂಡಿದ್ದಾರೆ.

ಸರಿಸುಮಾರು 200 ಚಿತ್ರಗಳಲ್ಲಿ ನಟಿಸಿರುವ ಬಿ ಸರೋಜಾದೇವಿ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಭಾರತ ಸರ್ಕಾರ ನೀಡುವ ಜೀವ ಮಾನ ಸಾಧನ ಪ್ರಶಸ್ತಿಗಳನ್ನ ತಮ್ಮ ಮುಡಿಗೇರಿಸಿಕೊಂಡಿರೋದು ಸರೋಜಾದೇವಿಯವರ ಗರಿಮೆ ಎನ್ನಬಹುದು..ಇದೀಗ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಪಾತ್ರರಾಗಿದ್ದಾರೆ.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button