DharwadKarnatakaNationalNew Delhi

ಮತಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ| ರಾಹುಲ್‌ ಗಾಂಧಿ ಹೋರಾಟಕ್ಕೆ ಮಣಿದ ಸರ್ಕಾರ|ಡಿ.9 ರಂದು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ

ಸಂಸತ್ತು ಭಾರತದ ಜನರಿಗೆ ಸೇರಿದ್ದು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ಜನರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚೆ ಮಾಡೋಣ ಅಂದರೇ, ಅದರಿಂದ ಅವರು ನಿರಂತರವಾಗಿ ಪಲಾಯನಗೊಳ್ಳುತ್ತಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದರು.

ಒಂದೆಡೆ ವೋಟ್‌ ಚೋರಿ ಮತ್ತು ಇನ್ನೊಂದೆಡೆ ಮತಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, ರಾಷ್ಟ್ರಾದ್ಯಂತ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮೊದಲ ಜಯ ಸಿಕ್ಕಿದೆ.

ಸಂಸತ್ತಿನ ಚಳಿಗಾಲದ ಅಧೀವೇಶನದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್)‌ ಚರ್ಚೆಗೆ ಅವಕಾಶ ನೀಡದ ಪರಿಣಾಮ ವಿಪಕ್ಷಗಳ ಆಕ್ರೋಶಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಡಿ9 ಮತ್ತು 10 ರಂದು ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಅವಕಾಶ ನೀಡುವದಾಗಿ ಪ್ರಕಟಿಸಿದೆ.

ಡಿಸೆಂಬರ್‌ 1 ರಿಂದ ಶುರು ಆಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡು ದಿನವು ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಬಿಗಿಪಟ್ಟು ಹಿಡಿದಿದ್ದರಿಂದ ಕಲಾಪಗಳನ್ನು ಪದೇ ಪದೇ ಮುಂದೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಪಕ್ಷಗಳ ಆಕ್ರೋಶವು ಜನಾಕ್ರೋಶವಾಗಿ ತಿರುಗುವ ಸಾಧ್ಯತೆ ಕಂಡು ಬಂದಿದ್ದರಿಂದ ಮಂಗಳವಾರದಂದು ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ಡಿಸೆಂಬರ್‌ 9 ರಂದು ಮಧ್ಯಾಹ್ನ 12 ಗಂಟೆಗೆ ಮತಪಟ್ಟಿ ವಿಶೇಷ ಪರಿಷ್ಕರಣೆಯ ಕುರಿತು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಸರ್ವಪಕ್ಷ ಸಭೆಗೂ ಮುನ್ನ ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳು ಸಂಸತ್ತಿನ ಒಳಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಮಂಗಳವಾರದಂದು ಸಂಸತ್‌ ಆವರಣಕ್ಕೆ ಬಂದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಹಲವಾರು ನಾಯಕರು ಭಾಗವಹಿಸಿದ್ದರು.

ಮತಪಟ್ಟಿ ವಿಶೇಷ ಪರಿಷ್ಕರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ, ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗಿದರು.

ಸಂಸತ್ತಿನ ಅಧಿವೇಶನದಲ್ಲಿ ಸಾರ್ವಜನಿಕ ವಿಷಯಗಳ ಚರ್ಚೆಗೆ ಪ್ರಧಾನಿ ಮೋದಿ ಅವಕಾಶ ನೀಡುವದಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದರು.

ಸಂಸತ್ತು ಭಾರತದ ಜನರಿಗೆ ಸೇರಿದ್ದು ಎಂದು ಪ್ರಧಾನಿ ಮೋದಿ ಹೇಳುತ್ತಾರೆ.

ಆದರೆ ಜನರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚೆ ಮಾಡೋಣ ಅಂದರೇ, ಅದರಿಂದ ಅವರು ನಿರಂತರವಾಗಿ ಪಲಾಯನಗೊಳ್ಳುತ್ತಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದರು.

ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕುಗಳಿಗಿಂತ ದೊಡ್ಡ ಸಾರ್ವಜನಿಕ ಸಮಸ್ಯೆ ಏನಿರಬಹುದು? ಎಂದು ಪ್ರಧಾನಿ ಮೋದಿ ವಿರುದ್ದ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಎಸ್‌ಐಆರ್‌ ವಿಷಯವನ್ನು ನಿಯಮ 267ರಡಿಯಲ್ಲಿ ಕೈಗೆತ್ತಿಕೊಳ್ಳಲೇಬೇಕು. ಈ ನಿಯಮದಡಿ ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಳ್ಳಲೇಂದೆ ಈ ನಿಯಮವಿದೆ.

ಸರ್ಕಾರ ತನ್ನ ಮೊಂಡುತನದಿಂದ ನಿಯಮಗಳನ್ನು ಮೀರಿ ವರ್ತಿಸುತ್ತಿದೆ ಇದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವೋಟ್‌ ಚೋರಿ ವಿರುದ್ದ ರಾಷ್ಟ್ರಾದ್ಯಂತ ನಡೆಸುತ್ತಿರುವ ಅಭಿಯಾನದ ಅಂಗವಾಗಿ ಸಹಿ ಸಂಗ್ರಹ ಸಹ ನಡೆಸಲಾಗಿತ್ತು.

ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗು ಡಿಸಿಎಂ ಡಿ ಕೆ ಶಿವಕುಮಾರ್‌ ಜೊತೆ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅನೀಲ್‌ಕುಮಾರ್‌ ಪಾಟೀಲ್

ಆಯಾ ರಾಜ್ಯಗಳಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್‌ ಹೈಕಮಾಂಡ ಸೂಚಿಸಿತ್ತು.

ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಹಾಗು ಡಿಸಿಎಂ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಹಿ ಸಂಗ್ರಹಣೆ ಭಾರಿ ಯಶಸ್ವಿಯಾಗಿತ್ತು.

ಈ ವೇಳೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಿಗೆ ನೀಡಿದ್ದ ಟಾಸ್ಕ್‌ನಲ್ಲಿ ಒಂದುವರೆ ಲಕ್ಷಕ್ಕೂ ಅತಿ ಹೆಚ್ಚು ಸಹಿ ಸಂಗ್ರಹಣೆ ಮಾಡಿರುವ ಧಾರವಾಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹಾಗು ಮಾಜಿ ಮಹಾಪೌರ ಅನೀಲ್‌ಕುಮಾರ್‌ ಪಾಟೀಲ್‌ ಈಗಲೂ ಅದನ್ನು ಮುಂದುವರೆಸಿದ್ದಾರೆ. ‌

ಜನರಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ವೋಟ್‌ ಚೋರಿಯಿಂದ ಆಗುವ ಪರಿಣಾಮಗಳೇನು? ಎಂಬುದರ ಬಗ್ಗೆ ವಿಶೇಷ ಕಾರ್ಯಾಗಾರ ಹಾಗೂ ಸಭೆ ಮತ್ತು ಮನೆ ಮನೆಗೆ ತೆರಳಿ ಮಾಹಿತಿ ನೀಡುವ ಮೂಲಕ ಜಾಗೃತಿ ಉಂಟು ಮಾಡುತ್ತಿದ್ದಾರೆ.

ಅನೀಲ್‌ಕುಮಾರ್‌ ಪಾಟೀಲ್‌ ಅವರ ಈ ಸಾಧನೆಯನ್ನು ಖುದ್ದು ಗಮನಿಸಿರುವ ಕಾಂಗ್ರೆಸ್‌ ಹೈಕಮಾಂಡನ ಮಂಚೂಣಿ ನಾಯಕರು ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಅವರಿಗೆ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button