DistrictShivamogga

ಗೋವಿನ ವಧೆ ಮಾಡಲು ನಾವ್‌ ಬಿಡಲ್ಲ..| ಗೋ ಸಾಗಾಣಿಕೆಗೆ ಕಡಿವಾಣ ಹಾಕಿ..|ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಬಹುಸಂಖ್ಯಾತರು ಪೂಜಿಸುವ ಗೋಹತ್ಯೆ ನಿರಾತಂಕವಾಗಿ ಸಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಶಿವಮೊಗ್ಗ: ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಅಕ್ರಮ ಗೋಸಾಗಾಣಿಕೆ ಮತ್ತು ಗೋಹತ್ಯೆಯಾಗದಂತೆ ತಡೆಯಲು ಸರ್ಕಾರ ಮತ್ತು ಜಿಲ್ಲಾಡಳಿತ ಮತ್ತಷ್ಟು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಬೇಕೆಂದು ಗೋವರ್ಧನ ಟ್ರಸ್ಟ್ ಮಹಾಪೋಷಕ ಮತ್ತು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಕೆ.ಎಸ್.ಈಶ್ವರಪ್ಪ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಕ್ರೀದ್ ಹಬ್ಬದ ಆಚರಣೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ಹಸುಗಿಂತ ಕರುವನ್ನು ಐಷಾರಾಮಿ ವಾಹನಗಳಲ್ಲಿ ಕಳವು ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದಾರೆಂದು ಆರೋಪಿಸಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಬಹುಸಂಖ್ಯಾತರು ಪೂಜಿಸುವ ಗೋಹತ್ಯೆ ನಿರಾತಂಕವಾಗಿ ಸಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಒಂದು ಪ್ರಕರಣ ದಾಖಲಾಗಿ ಕಠಿಣ ಶಿಕ್ಷೆಯಾದರೆ ಮತ್ತೆ ಅಂತಹ ಪ್ರಕರಣ ಮರುಕಳಿಸುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.

ಗೋವರ್ಧನ ಟ್ರಸ್ಟ್ ವತಿಯಿಂದ ಒಂದು ಗೋವನ್ನು ಸಹ ವಧೆ ಮಾಡಲು ಬಿಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ, ಪೋಲೀಸ್ ಇಲಾಖೆಯು ಶಿವಮೊಗ್ಗ ನಗರದ ಪ್ರಮುಖ ಮಾರ್ಗಗಳಲ್ಲಿ ನಾಕಾಬಂಧಿ ಹೆಚ್ಚಿಸಿ ಗೋಹತ್ಯೆ ಮತ್ತು ಅಕ್ರಮ ಗೋಸಾಗಣೆಗೆ ಕಡಿವಾಣಹಾಕಬೇಕೆಂದು ಅವರು ಒತ್ತಾಯಿಸಿದರು.

ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ನೀಡಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಅಭಿಷೇಕ್ ಅವರು ಸ್ವೀಕರಿಸಿದರು.

ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಡಿವೈ ಎಸ್ ಪಿ ಆಂಜನಪ್ಪ, ಟ್ರಸ್ಟ ಅಧ್ಯಕ್ಷ ಕೆಇ ಕಾಂತೇಶ್, ಉಮೇಶ್ ಆರಾಧ್ಯ, ರಮೇಶ್ ಬಾಬು,ಈ ವಿಶ್ವಾಸ್ , ಕುಬೇರಪ್ಪ ಹಾಜರಿದ್ದರು.

Follow Us

Leave a Reply

Your email address will not be published. Required fields are marked *

Back to top button