AgricultureShivamogga

ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ|ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಕೇಂದ್ರ ಸರ್ಕಾರ|ಫೆ.28ರವರೆಗೆ ರೈತರಿಂದ ಭತ್ತ ಖರೀದಿ-ಡಿಸಿ ಗುರುದತ್ತ ಹೆಗಡೆ

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ, ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು.

ಶಿವಮೊಗ್ಗ,ಡಿ.೦6, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ದರದ ಪ್ರಕಾರವೇ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕೇಂದ್ರ ಸರ್ಕಾರವು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದೆ ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369, ಗ್ರೇಡ್ “ಎ” ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2389 ರಂತೆ ಖರೀದಿಸಲಾಗುವುದು ಎಂದು ಡಿಸಿ ಗುರುದತ್ತ ಹೆಗಡೆ ಹೇಳಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್‌ಪಿಓ/ಎಸ್‌ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ.

ಈ ಏಜೆನ್ಸಿಗಳ ಮೂಲಕವೇ ಭತ್ತ ಖರೀದಿ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ, ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು.

ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್‌ಗಳಲ್ಲಿರುವ ಕೆಎಫ್‌ಸಿಎಸ್‌ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು ಎಂದು ಡಿಸಿ ಗುರುದತ್ತ ಹೆಗಡೆ ಹೇಳಿದ್ದಾರೆ.

ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ದಾಖಲೆಗಳೊಂದಿಗೆ (ಐಡಿ) ಖರೀದಿ ಕೇಂದ್ರಗಳಲ್ಲಿ ಡಿಸೆಂಬರ್‌ 31ರವರೆಗೆ ನೊಂದಾಯಿಸಿಕೊಳ್ಳಬಹುದು.

ಫೆಬ್ರುವರಿ 28ವರೆಗೆ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button